ಬೆಳಗಾವಿ: ಇಂದು ಚುನಾವಣೆ ನಡೆದರೆ ಕಾಂಗ್ರೆಸ್‌ಗೆ ಕೇವಲ 20 ಸೀಟು ಬರುತ್ತದೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬಂದು ಎರಡು ವರ್ಷವಾಗಿದೆ. ಭಂಡತನದಿಂದ ಐದು ಗ್ಯಾರಂಟಿ ಕೊಡುತ್ತೇವೆ ಎಂದಿದ್ದರು. ಆದರೆ ಈಗ ಗ್ಯಾರಂಟಿ ಹಣವನ್ನೂ ಕೊಡುತ್ತಿಲ್ಲ. ಗೃಹಲಕ್ಷ್ಮೀ ಹಣ ಮೂರು ತಿಂಗಳಿನಿಂದ ಖಾತೆಗೆ ಜಮೆ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ದಿನನಿತ್ಯ ಕೊಲೆ ಸುಲಿಗೆ ಆಗುತ್ತಿವೆ. ಬೇರೆ ರಾಜ್ಯದವರು ಬಂದು ಕಳ್ಳತನ ಮಾಡ್ತಿದ್ದಾರೆ. ಜನರಿಗೆ, ಹೆಣ್ಣು ಮಕ್ಕಳಿಗೆ ರಕ್ಷಣೆಯಿಲ್ಲ. ಪುಂಡರ ಹಾವಳಿ ಜಾಸ್ತಿ ಆಗಿದೆ. ಸರ್ಕಾರದ ಹಿಡಿತ ತಪ್ಪಿ ಹೋಗಿದ್ದು, ಸಿದ್ದರಾಮಯ್ಯ ಎಲ್ಲದರಲ್ಲೂ ವಿಫಲರಾಗಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕರ್ನಾಟಕದಲ್ಲಿ ದಲಿತ ಸಿಎಂ ಮಾಡಲು ಅವಕಾಶ ಇದೆ. ಖರ್ಗೆ ಅವರು ಯಾರನ್ನಾದರೂ ಮಾಡಲಿ. ದಲಿತ ಸಿಎಂ ಮಾಡುತ್ತೇವೆ ಎಂದು ಘೋಷಣೆ ಮಾಡಲಿ. ಪರಮೇಶ್ವರ್, ಮುನಿಯಪ್ಪ ಅವರನ್ನು ಮಾಡಬೇಕು. ಇಲ್ಲವಾದರೆ ಖರ್ಗೆ ಅವರೇ ದಲಿತ ಸಿಎಂ ಆಗಲಿ ಎಂದು ಅಭಿಪ್ರಾಯಪಟ್ಟರು.
ಬೆಂಗಳೂರು : ಸಂವಿಧಾನವನ್ನ ದುರ್ಬಲಗೊಳಿಸುವ ಪ್ರಯತ್ನ ನಡೆಸುವುದು ವಿಷ ಉಣಿಸುವ ಸಂಚು. ಸಂವಿಧಾನವನ್ನ ನಾವು ರಕ್ಷಿಸಿದ್ರೆ ಸಂವಿಧಾನ ನಮ್ಮನ್ನ ರಕ್ಷಿಸುತ್ತದೆ.…
ಹೊಸದಿಲ್ಲಿ : 77ನೇ ಗಣರಾಜ್ಯೋತ್ಸವದ ಅಂಗವಾಗಿ ದಿಲ್ಲಿಯ ಕರ್ತವ್ಯ ಪಥದಲ್ಲಿ ಭಾರತವು ಸಾಂಸ್ಕೃತಿಕ ವೈವಿಧ್ಯತೆಯೊಂದಿಗೆ ದೇಶದ ಸೇನಾ ಶಕ್ತಿ ಪ್ರದರ್ಶನ…
ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…
ಉಡುಪಿ : ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…
ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…
ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…