ರಾಜ್ಯ

ಗೃಹಲಕ್ಷ್ಮೀಯರಿಗೆ ಮತ್ತೊಂದು ಗುಡ್‌ನ್ಯೂಸ್: ಗೃಹಲಕ್ಷ್ಮೀ ಸಂಘಗಳ ರಚನೆಗೆ ಕಾರ್ಯಯೋಜನೆ

ಬೆಂಗಳೂರು: ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ “ಗೃಹಲಕ್ಷ್ಮೀ ಸಂಘ” ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಈ ಬಗ್ಗೆ ವಿಧಾನಸೌಧದಲ್ಲಿಂದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಂದ ಸ್ವಸಹಾಯ/ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ‘ಗೃಹಲಕ್ಷ್ಮಿ’ ಸಂಘವನ್ನು ರಚಿಸಲಾಗುವುದು ಎಂದರು.

ರಾಜ್ಯದಲ್ಲಿ ಗೃಹಲಕ್ಷ್ಮಿಯೋಜನೆಯಡಿ 1.25 ಕೋಟಿ ಫಲಾನುಭವಿಗಳಿದ್ದಾರೆ. ಪ್ರತಿ ತಿಂಗಳು ಸಂದಾಯ ಆಗುತ್ತಿರುವ 2 ಸಾವಿರ ರೂಪಾಯಿ ಹಣವನ್ನು ಇನ್ನಷ್ಟು ಸದುಪಯೋಗ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಗೃಹಲಕ್ಷ್ಮಿ ಸಂಘಗಳನ್ನು ರಚಿಸಲಾಗುವುದು. ಈ ಮೂಲಕ ಗೃಹಲಕ್ಷ್ಮಿ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವುದೇ ಇದರ ಉದ್ದೇಶವಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಗೃಹಲಕ್ಷ್ಮಿ ಸಂಘಗಳನ್ನು ಆಯ್ದ ನಾಲ್ಕೈದು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲು ಉದ್ದೇಶ ಹೊಂದಲಾಗಿದೆ. ನಂತರದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಗರ- ಗ್ರಾಮೀಣ ಪ್ರದೇಶಗಳಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಅಸ್ತಿತ್ವಕ್ಕೆ ತರಲಾಗುವುದು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

16 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

17 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

17 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

18 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

22 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

22 hours ago