ರಾಜ್ಯ

ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ; ಎಷ್ಟು ತಿಂಗಳ ಹಣ ಜಮೆ ?

ಬೆಂಗಳೂರು : ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಹುತೇಕ ಜಿಲ್ಲೆಯ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣ ಸೋಮವಾರ ಸಂಜೆ ಖಾತೆಗೆ ಜಮೆಯಾಗಿದೆ.

ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ ಸೇರಿದಂತೆ ಬಹುತೇಕ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದೆ.

ಯೋಜನೆ ಜಾರಿಯಾದಂದಿನಿಂದ 17 ತಿಂಗಳ(2024 ಡಿಸೆಂಬರ್ ರವರೆಗೆ )ಹಣ ಜಮೆಯಾಗಿದೆ. ಈ ವರ್ಷದ ಜನವರಿ ಫೆಬ್ರವರಿ ತಿಂಗಳ ಹಣ ಬಾಕಿಯಿತ್ತು. ಸದ್ಯ ಜನವರಿ ತಿಂಗಳ ಜಮೆಯಾಗಿದ್ದು, ಶೀಘ್ರದಲ್ಲೇ ಫೆಬ್ರವರಿ ತಿಂಗಳ ಹಣ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ತಿಳಿಸಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

17 mins ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

25 mins ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

1 hour ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

2 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

3 hours ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

3 hours ago