ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ ಅರ್ಹತೆ ಪಡೆಯುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯಪಾಲರ ವಂದನ ನಿರ್ಣಯದ ಮೇಲೆ ಬಿಜೆಪಿ ಸದಸ್ಯ ಟಿ.ಹೆಚ್.ಪೂಜಾರ್ ಅವರು ಮಾತನಾಡುತ್ತಿದ್ದ ವೇಳೆ ಬಾಗಲಕೋಟೆ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿ ಕೆಲವು ಫಲಾನುಭವಿಗಳಿಗೆ ಹಣವು ಬಂದಿಲ್ಲ .ಅಲ್ಲದೆ ಅವರನ್ನು ಈ ಯೋಜನೆ ವ್ಯಾಪ್ತಿಯಿಂದ ಕೈ ಬಿಟ್ಟಿದ್ದಾರೆ ಎಂದು ಆರೋಪಿಸಿದರು.
ಈ ವೇಳೆ ಮಧ್ಯ ಪ್ರವೇಶಿಸಿ ಮಾತನಾಡಿದ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆ ಅಡಿ ರಾಜ್ಯದಲ್ಲಿ ಒಟ್ಟು 1ಕೋಟಿ 26 ಲಕ್ಷ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಅವರ ಖಾತೆಗೆ ನೇರವಾಗಿ ಎರಡು ಸಾವಿರ ರೂಪಾಯಿ ಆರ್ಥಿಕ ನೆರವು ನೀಡುತ್ತಿದ್ದೇವೆ. ಕೆಲವು ಕಾರಣಗಳಿಂದ 52,000 ಮಹಿಳಾ ಫಲಾನುಭವಿಗಳನ್ನು ಯೋಜನೆಯಿಂದ ತೆಗೆದುಹಾಕಲಾಗಿದೆ. ಆದಾಯ ತೆರಿಗೆ ಹಾಗೂ ಜಿಎಸ್‌ಟಿ ವ್ಯಾಪ್ತಿಗೆ ಬರುವವರು ಈ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ ಎಂದು ತಿಳಿಸಿದರು.
ಈ ಯೋಜನಾ ಉದ್ದೇಶವೇ ಬಡ ಮಹಿಳೆಯರ ಆರ್ಥಿಕ ಸಬಲೀಕರಣವಾಗಿದೆ. ಎಪಿಎಲ್, ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿದ್ದರೆ ಅಂತವರು ಮಾತ್ರ ಫಲಾನುಭವಿಗಳು ಆರ್ಹತೆ ಪಡೆಯುತ್ತಾರೆ. ಜಿಎಸ್‌ಟಿ ಮತು ಆದಾಯ ತೆರಿಗೆ ಪಾವತಿದಾರರು ಯೋಜನೆ ವ್ಯಾಪ್ತಿಗೆ ಬರುವುದಿಲ್ಲ. ಅಂತವರನ್ನು ಲಾಗಿನ್ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಸಂಬಂಧ ಈ ನಾವು ಹಲವಾರು ಬಾರಿ ಐಟಿ ಅಧಿಕಾರಿಗಳು ಮತ್ತು ಜಿಎಸ್‌ಟಿ ಕೌನ್ಸಿಲಿಂಗ್ ಸಭೆಯಲ್ಲಿ ಪ್ರಸ್ತಾಪಿಸಿ ವಿಷಯವನ್ನು ಗಮನಕ್ಕೆ ತಂದಿದ್ದೇವೆ. ಆದರೆ ನಿಯಮಗಳ ಪ್ರಕಾರ ಆದಾಯ ತೆರಿಗೆ ಪಾವತಿ ಮಾಡುವವರು ಬಡತನ ರೇಖೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಆದರೂ ಪತ್ರ ವ್ಯವಹಾರ ಮುಂದುವರಿದಿದೆ ಎಂದು ಹೇಳಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…