ರಾಜ್ಯ

ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ನೋಟಿಸ್‌: ಜುಲೈ.25ರಂದು ಪ್ರತಿಭಟನೆಗೆ ನಿರ್ಧಾರ

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ನೋಟಿಸ್ ಜಾರಿ ವಿರೋಧಿಸಿ ಸಣ್ಣ ವ್ಯಾಪಾರಿಗಳು ಜುಲೈ.25ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದ್ದು, ರಾಜ್ಯಾದ್ಯಂತ ಲಕ್ಷಾಂತರ ಸಣ್ಣ ವ್ಯಾಪಾರ ಮಾಲೀಕರು ಮತ್ತು ಅವರ ಕುಟುಂಬಗಳು ಪ್ರತಿಭಟನೆ ನಡೆಸಲಿದ್ದಾರೆ.

ಪ್ರತಿಭಟನೆಯ ನೇತೃತ್ವ ವಹಿಸಿರುವ ಕರ್ನಾಟಕ ರಾಜ್ಯ ಕಾರ್ಮಿಕರ ಮಂಡಳಿಯು, ಸಣ್ಣ ವ್ಯಾಪಾರಿಗಳಿಗೆ 2021ರ ಹಿಂದಿನ 20 ಲಕ್ಷ ರೂ.ಗಳಿಂದ 50 ಲಕ್ಷ ರೂ.ಗಳವರೆಗಿನ ತೆರಿಗೆ ನೋಟಿಸ್‌ಗಳನ್ನು ನೀಡಿದ್ದಾರೆ. ಈ ನೋಟಿಸ್‍ಗಳನ್ನು ಯಾವುದೇ ಪೂರ್ವ ಮಾಹಿತಿ ಅಥವಾ ವಿವರಣೆಯಿಲ್ಲದೆ ನೀಡಲಾಗಿದೆ ಎಂದು ಆರೋಪಿಸಿದೆ.

ಈ ಪ್ರತಿಭಟನೆಯಲ್ಲಿ ಬೇಕರಿಗಳು, ತರಕಾರಿ ಮತ್ತು ಹಣ್ಣಿನ ಅಂಗಡಿಗಳು, ಹೂವಿನ ಅಂಗಡಿಗಳು, ಚಹಾ ಮಾರಾಟಗಾರರು ಮತ್ತು ಮಾಂಸದ ಅಂಗಡಿಗಳ ಮಾಲೀಕರು ಭಾಗವಹಿಸಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

10 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

10 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

17 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

17 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

17 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

17 hours ago