ರಾಜ್ಯ

ಜಿ.ಟಿ.ದೇವೇಗೌಡ ಅವರ ಹೇಳಿಕೆ ಜೆಡಿಎಸ್‌ ಪಕ್ಷದ ಆಂತರಿಕ ವಿಚಾರ: ಬಿ.ವೈ.ವಿಜಯೇಂದ್ರ

ಹುಬ್ಬಳ್ಳಿ: ದಸರಾ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ ಎಂದು ಶಾಸಕ ಜಿ.ಟಿ.ದೇವೇಗೌಡ ಅವರು ನೀಡಿರುವ ಹೇಳಿಕೆ ಜೆಡಿಎಸ್‌ ಪಕ್ಷದ ಆಂತರಿಕ ವಿಚಾರವಾಗಿದೆ, ಅದನ್ನು ಸರಿ ಮಾಡಿಕೊಳ್ಳುವ ಶಕ್ತಿ ಕುಮಾರಸ್ವಾಮಿಗಿದೆ, ಹೀಗಾಗಿ ಅದರ ಬಗ್ಗೆ ನಾನು ಮಾತನಾಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿ.ಡಿ.ದೇವೇಗೌಡ ಅವರು ನೀಡಿರುವ ಹೇಳಿಕೆಯನ್ನು ಸರಿ ಪಡಿಸಿಕೊಳ್ಳುವ ಶಕ್ತಿ ಜೆಡಿಎಸ್‌ ಪಕ್ಷದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗಿದೆ. ಆ ಕಾರಣಕ್ಕಾಗಿ ನಾನು ಆ ಬಗ್ಗೆ ಟೀಕೆ ಮಾಡಲು ಸಾಧ್ಯವಿಲ್ಲ. ಮೈಸೂರು ಚಲೋ ಪಾದಯಾತ್ರೆ ಮಾಡಬೇಕಾದರೆ ಜಿ.ಟಿ.ದೇವೇಗೌಡರನ್ನು ಕೇಳಿ ಪಾದಯಾತ್ರೆ ಮಾಡಿರಲಿಲ್ಲ. ಮುಡಾ ಹಗರಣದ ಅಕ್ರಮ ವಿರುದ್ಧ ಹೋರಾಟ ಮಾಡುವುದು ವಿರೋಧ ಪಕ್ಷದ ಜವಾಬ್ದಾರಿಯಾಗಿತ್ತು. ಹೀಗಾಗಿ ಭ್ರಷ್ಟ ಮುಖ್ಯಮಂತ್ರಿಯಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ನಾವೆಲ್ಲರೂ ಹೋರಾಟವನ್ನು ಮಾಡಿದ್ದೇವೆ ಎಂದು ತಿರುಗೇಟು ನೀಡಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಅಧಿವೇಶನ ನಡೆಯುವಾಗ ಮುಡಾ ಹಗರಣದಲ್ಲಿ ಕೇವಲ 14 ನಿವೇಶನಗಳು ಮಾತ್ರ ಹಗರಣ ನಡೆದಿಲ್ಲ. ಅದರ ಬದಲಾಗಿ ಮುಡಾದಲ್ಲಿ ಸಾವಿರಾರು ಕೋಟಿ ರೂ.ಗಳಷ್ಟು ಹಗರಣ ನಡೆದಿದೆ ಎಂಬ ವಿಚಾರ ಕುರಿತು ಚರ್ಚೆಯಾಗಿತ್ತು. ಆಗ ಸಿಎಂ ಸಿದ್ದರಾಮಯ್ಯ ಅವರು ಮುಡಾದಲ್ಲಿ ಹಗರಣವೇ ಆಗಿಲ್ಲ. ಈ ಬಗ್ಗೆ ಚರ್ಚೆ ನಡೆಸುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದರು. ಅಲ್ಲದೇ ಇದರಲ್ಲಿ ಮಂತ್ರಿ ಮಂಡಲ ಸಹ ಯಾವುದೇ ತಪ್ಪು ಮಾಡಿಲ್ಲ ಎಂದಿದ್ದರು. ಆದರೆ, ಇದೀಗ ಆರ್‌ಟಿಇ ಕಾರ್ಯಕರ್ತನ ದೂರಿನ ಆಧಾರದ ಮೇಲೆ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿರುವುದಲ್ಲದೇ, ತನಿಖೆ ನಡೆಸುವಂತೆ ಕೋರ್ಟ್‌ನಿಂದ ಆದೇಶ ಮಾಡುವಂತೆ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಸಿದ್ದರಾಮಯ್ಯ ಅವರು ತಾನು ತಪ್ಪೇ ಮಾಡಿಲ್ಲವೆಂದು ವಾದಿಸಿ, ನಿವೇಶನಗಳನ್ನು ವಾಪಾಸ್ಸು ಪಡೆಯಲು ಮುಡಾದಿಂದ ನಮಗೆ 64 ಕೋಟಿ ರೂ.ಗಳಷ್ಟು ಹಣ ನೀಡಿದರೆ ಮಾತ್ರ ನಿವೇಶನಗಳನ್ನು ವಾಪಾಸ್ಸು ಮಾಡುವುದಾಗಿದೆ ಹೇಳಿಕೊಂಡಿದ್ದರು. ಆದರೆ, ಇ.ಡಿ.ತನಿಖೆ ನಡೆಸುವ ಸಂದರ್ಭದಲ್ಲಿ ಯಾವುದೇ ಹಣಕ್ಕೆ ಬೇಡಿಕೆ ಇಡದೇ ನಿವೇಶನಗಳನ್ನು ವಾಪಾಸು ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಹುಶಃ 14 ನಿವೇಶನಗಳು ತಮ್ಮಗೆ ಕುತ್ತು ತರುತ್ತವೆ ಎಂದು ಜ್ಞಾನೋದಯವಾಗಿ ಆ ನಿವೇಶನಗಳನ್ನು ವಾಪಾಸ್‌ ಕೊಟ್ಟಿರಬೇಕು ಎಂದು ವಾಗ್ದಾಳಿ ನಡೆಸಿದರು.

 

ಅರ್ಚನ ಎಸ್‌ ಎಸ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

6 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

8 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

8 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

9 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

9 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

10 hours ago