ಬೆಂಗಳೂರು : ಮುಂಬರುವ ದಿನಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಕಾಂಗ್ರೆಸ್ ಪಕ್ಷ ಸೇರಿಕೊಳ್ಳಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾದಿದ ಸಚಿವರು, ಹಲವಾರು ಜನರು ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜಿ.ಟಿ ದೇವೇಗೌಡರು ನಮಗೆ ತುಂಬಾ ಹಳಬರು, ಸ್ವಲ್ಪ ದಿನ ನಮ್ಮಿಂದ ದೂರವಾಗಿದ್ದರು. ಈಗ ಮತ್ತೆ ಕೆಲವೇ ದಿನಗಲಲ್ಲಿ ಕಾಂಗ್ರೆಸ್ ಪಕ್ಷ ಸೇರಿಕೊಳ್ಳಲಿದ್ದಾರೆ. ಅವರನ್ನು ನಮ್ಮ ಹತ್ತಿರವೇ ಇರುವ ಹಾಗೆ ನೋಡಿಕೊಳ್ಳುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಈಗಾಗಲೇ ಶಾಸಕ ಚನ್ನಬಸಪ್ಪ ನಮ್ಮ ಹತ್ತಿರದಲ್ಲಿದ್ದಾರೆ ಎಂದೂ ಅವರು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಒಳ ಜಗಳಗಳು ಹೆಚ್ಚಾಗಿದ್ದು,ಪಕ್ಷ ಬೀಳಲಿದೆ ಹಾಗಾಗಿ ಆಪರೇಷನ್ ಹಸ್ತ ಮಾಡುತ್ತಿದ್ದಾರೆ ಎಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ತೀವ್ರ ತರಾಟೆ ತೆಗೆದುಕೊಂಡ ಬೆನ್ನಲ್ಲೇ, ಬಿಜೆಪಿಯವರು ಹಣದ ಆಸೆ ತೋರಿಸಿ ಮತ್ತೆ ಆಪರೆಷನ್ ಕಮಲ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಲಾಗಿತ್ತು.
ಇದರ ನಡುವೆ ಹಳೇ ಮೈಸೂರು ಭಾಗದ ಪ್ರಭಾವಿ ನಾಯಕ ಜಿಟಿ ದೇವೇಗೌಡರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಹೇಳಿಕೆ ಹಲವಾರು ಚರ್ಚೆಗೆ ಗ್ರಾಸವಾಗಿದೆ.