ರಾಜ್ಯ

ಕೆಲವೇ ದಿನಗಳಲ್ಲಿ ಜೆಡಿಎಸ್‌ನ ಜಿಟಿಡಿ ಕಾಂಗ್ರೆಸ್‌ ಸೇರಲಿದ್ದಾರೆ: ಮಧು ಬಂಗಾರಪ್ಪ

ಬೆಂಗಳೂರು : ಮುಂಬರುವ ದಿನಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ ಕಾಂಗ್ರೆಸ್‌ ಪಕ್ಷ ಸೇರಿಕೊಳ್ಳಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾದಿದ ಸಚಿವರು, ಹಲವಾರು ಜನರು ಈಗಾಗಲೇ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜಿ.ಟಿ ದೇವೇಗೌಡರು ನಮಗೆ ತುಂಬಾ ಹಳಬರು, ಸ್ವಲ್ಪ ದಿನ ನಮ್ಮಿಂದ ದೂರವಾಗಿದ್ದರು. ಈಗ ಮತ್ತೆ ಕೆಲವೇ ದಿನಗಲಲ್ಲಿ ಕಾಂಗ್ರೆಸ್‌ ಪಕ್ಷ ಸೇರಿಕೊಳ್ಳಲಿದ್ದಾರೆ. ಅವರನ್ನು ನಮ್ಮ ಹತ್ತಿರವೇ ಇರುವ ಹಾಗೆ ನೋಡಿಕೊಳ್ಳುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಈಗಾಗಲೇ ಶಾಸಕ ಚನ್ನಬಸಪ್ಪ ನಮ್ಮ ಹತ್ತಿರದಲ್ಲಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಕಾಂಗ್ರೆಸ್‌ ಪಕ್ಷದಲ್ಲಿ ಒಳ ಜಗಳಗಳು ಹೆಚ್ಚಾಗಿದ್ದು,ಪಕ್ಷ ಬೀಳಲಿದೆ ಹಾಗಾಗಿ ಆಪರೇಷನ್‌ ಹಸ್ತ ಮಾಡುತ್ತಿದ್ದಾರೆ ಎಂದು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ತೀವ್ರ ತರಾಟೆ ತೆಗೆದುಕೊಂಡ ಬೆನ್ನಲ್ಲೇ, ಬಿಜೆಪಿಯವರು ಹಣದ ಆಸೆ ತೋರಿಸಿ ಮತ್ತೆ ಆಪರೆಷನ್‌ ಕಮಲ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಲಾಗಿತ್ತು.
ಇದರ ನಡುವೆ ಹಳೇ ಮೈಸೂರು ಭಾಗದ ಪ್ರಭಾವಿ ನಾಯಕ ಜಿಟಿ ದೇವೇಗೌಡರು ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ಹೇಳಿಕೆ ಹಲವಾರು ಚರ್ಚೆಗೆ ಗ್ರಾಸವಾಗಿದೆ.

andolanait

Recent Posts

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

52 mins ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

1 hour ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

1 hour ago

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…

1 hour ago

ಇರಾನ್‌ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಲ್ಲಿ : ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯನ್‌…

2 hours ago

IPL | ಈ ಬಾರಿಯೂ ಕಪ್‌ ಗೆಲ್ಲಲು ಪರಿಶ್ರಮ ಅಗತ್ಯ ; ಆಟಗಾರರಿಗೆ ಕಿಂಗ್‌ ಕೊಹ್ಲಿ ಸಲಹೆ

ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್…

2 hours ago