ಗ್ಯಾರಂಟಿ ಯೋಜನೆ ನಿಲ್ಲಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲ ಊಹಾಪೋಹಗಳು ಹುಟ್ಟಿಕೊಂಡಿವೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಇಂದು(ಜೂ.14) ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಗ್ಯಾರಂಟಿ ಯೋಜನೆಗಳು ಪುನರ್‌ ಪರಿಶೀಲನೆಯೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾವು ಮತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿಗೆ ತಂದಿಲ್ಲ. ಬಡವರಿಗಾಗಿ ಪಂಚ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದು ಪುನರುಚ್ಚರಿಸಿದರು.

ನಮಗೆ ಲೋಕಸಭಾ ಚುನಾವಣೆಯ ಸ್ಥಾನಗಳಿಗೆಯಲ್ಲಿ ಹಿನ್ನಡೆಯಾಗಿರಬಹುದು. ಆದರೆ ಮತಗಳಿಕೆ ವಿಚಾರದಲ್ಲಿ ಶೇಕಡ 13 ರಷ್ಟು ಹೆಚ್ಚಾಗಿದೆ. ಹೈಕಮಾಂಡ್‌ಗೆ ಸೋಲಿನ ಬಗ್ಗೆ ಕಾರಣ ಹೇಳುತ್ತೇವೆ. ಮೈಸೂರು ಸೋತಿದ್ದು, ಚಾಮರಾಜನಗರ ಗೆದ್ದಿದ್ದೇವೆ. ರಾಜ್ಯದಲ್ಲಿ ಲೋಕಸಭಾ ಸ್ಥಾನಗಳಿಗೆಯಲ್ಲಿ 1 ರಿಂದ 9 ಸ್ಥಾನ ಗೆದ್ದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.