ಮೈಸೂರು: ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲ ಊಹಾಪೋಹಗಳು ಹುಟ್ಟಿಕೊಂಡಿವೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಇಂದು(ಜೂ.14) ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಗ್ಯಾರಂಟಿ ಯೋಜನೆಗಳು ಪುನರ್ ಪರಿಶೀಲನೆಯೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾವು ಮತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿಗೆ ತಂದಿಲ್ಲ. ಬಡವರಿಗಾಗಿ ಪಂಚ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ ಎಂದು ಪುನರುಚ್ಚರಿಸಿದರು.
ನಮಗೆ ಲೋಕಸಭಾ ಚುನಾವಣೆಯ ಸ್ಥಾನಗಳಿಗೆಯಲ್ಲಿ ಹಿನ್ನಡೆಯಾಗಿರಬಹುದು. ಆದರೆ ಮತಗಳಿಕೆ ವಿಚಾರದಲ್ಲಿ ಶೇಕಡ 13 ರಷ್ಟು ಹೆಚ್ಚಾಗಿದೆ. ಹೈಕಮಾಂಡ್‌ಗೆ ಸೋಲಿನ ಬಗ್ಗೆ ಕಾರಣ ಹೇಳುತ್ತೇವೆ. ಮೈಸೂರು ಸೋತಿದ್ದು, ಚಾಮರಾಜನಗರ ಗೆದ್ದಿದ್ದೇವೆ. ರಾಜ್ಯದಲ್ಲಿ ಲೋಕಸಭಾ ಸ್ಥಾನಗಳಿಗೆಯಲ್ಲಿ 1 ರಿಂದ 9 ಸ್ಥಾನ ಗೆದ್ದಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…