ರಾಜ್ಯ

ಸಂಪನ್ಮೂಲದ ಗ್ಯಾರಂಟಿ ಇಲ್ಲದೆ ತಂದ ಗ್ಯಾರಂಟಿ ಯೋಜನೆಗಳಿಗೆ ಶಾಸಕರೇ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ: ಆರ್‌.ಅಶೋಕ

ಕಮಿಶನ್‌ಗಾಗಿ ಜನರಿಗೆ ದ್ರೋಹ ಬಗೆಯುತ್ತಿರುವ ಕಾಂಗ್ರೆಸ್‌ ಸಚಿವರು

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಕಾಂಗ್ರೆಸ್‌ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷದ ಸರ್ಕಾರ ಬಂದರೂ ಸಾಲ ಮಾಡಲೇಬೇಕು. ಇಂತಹ ಸ್ಥಿತಿಯಲ್ಲಿ ಸಂಪನ್ಮೂಲದ ಗ್ಯಾರಂಟಿಯೇ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆ ತರಲಾಗಿದೆ. ಇದನ್ನು ನಿರ್ವಹಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಬೆಸ್ಕಾಂ ಹಾಗೂ  ಇಲಾಖೆಗಳು ನಷ್ಟದಲ್ಲಿವೆ. ಕಾಂಗ್ರೆಸ್‌ ಶಾಸಕರೇ ಸರ್ಕಾರದ ವಿರುದ್ಧ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ. ಅದಕ್ಕೂ ಮುಂದೆ ಎಚ್ಚೆತ್ತುಕೊಳ್ಳಲಿ ಎಂದರು.

ಬೆಂಗಳೂರಿಗೆ ನಿಗದಿಯಾದ ಅನುದಾನಗಳನ್ನು ಈ ಹಿಂದೆಯೂ ವಾಪಸ್‌ ಪಡೆಯಲಾಗಿದೆ. ನಗರದಲ್ಲಿ ಪ್ರವಾಹದ ನಿಯಂತ್ರಣಕ್ಕಾಗಿ ಯೋಜನೆ ರೂಪಿಸಲು ಬಿಜೆಪಿ ಸರ್ಕಾರ ಅನುದಾನ ಮೀಸಲಿಟ್ಟಿತ್ತು. ಅದನ್ನು ಗ್ಯಾರಂಟಿಗೆ ನೀಡಲಾಗಿದೆ. ಪಾದಚಾರಿ ಮಾರ್ಗ, ಮೇಲ್ಸೇತುವೆ, ರಾಜಕಾಲುವೆ ಸೇರಿದಂತೆ ಎಲ್ಲ ಅಭಿವೃದ್ಧಿ ಯೋಜನೆಗಳ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಲಾಗಿದೆ. ಬಿಬಿಎಂಪಿ ಅನುದಾನ ಬಿಟ್ಟು, ಬಿಜೆಪಿ ಸರ್ಕಾರ 8-9 ಸಾವಿರ ಕೋಟಿ ರೂ. ನೀಡಿತ್ತು. ಈಗ ಸರ್ಕಾರ ಪಾಪರ್‌ ಆಗಿದೆ ಎಂದರು.

ಜನ ಔಷಧಿ ಯೋಜನೆ ಕೇಂದ್ರ ಸರ್ಕಾರದ್ದು. ಇದರಿಂದ ಅತಿ ಕಡಿಮೆ ದರದಲ್ಲಿ ಔಷಧಿಗಳು ದೊರೆಯುತ್ತವೆ. ಕಾಂಗ್ರೆಸ್‌ ಸರ್ಕಾರ ಹಾಗೂ ಸಚಿವರಿಗೆ ಲಾಬಿಗಳು ತಲೆ ಸವರಿದೆ. ಆದ್ದರಿಂದ ಇಂತಹ ಕೆಲಸ ಮಾಡಲು ಹೊರಟಿದ್ದಾರೆ. ಇವರಿಗೆ ಕಮಿಶನ್‌ ಸಿಗಲಿದೆ ಎಂಬ ಕಾರಣಕ್ಕೆ ಜನರಿಗೆ ದ್ರೋಹ ಬಗೆಯಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಾದಯಾತ್ರೆ ಯಶಸ್ವಿ

ಇತ್ತೀಚೆಗೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಉತ್ತಮವಾಗಿ ಸಾಮೂಹಿಕ ನಾಯಕತ್ವದಲ್ಲಿ ಪಾದಯಾತ್ರೆ ನಡೆದಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರು ನನಗೆ ಕರೆ ಮಾಡಿ, ಈ ಪಾದಯಾತ್ರೆಯಲ್ಲಿ ಎಲ್ಲರೂ ಭಾಗವಹಿಸಿ ಎಂದು ಹೇಳಿದ್ದರು. ಪಾದಯಾತ್ರೆ ಯಶಸ್ವಿಯಾಗಿರುವುದರಿಂದಲೇ ಕಾಂಗ್ರೆಸ್‌ ನಾಯಕರು ಭಯಕ್ಕೊಳಗಾಗಿ ಹೇಳಿಕೆಗಳನ್ನು ನೀಡಿದ್ದಾರೆ. ಸರ್ಕಾರದ ಎರಡು ಹಗರಣಗಳ ವಿರುದ್ಧ ಪಾದಯಾತ್ರೆಯ ಜೊತೆಗೆ, ಕೆಲವರು ರಾಜಭವನಕ್ಕೂ ದೂರು ಸಲ್ಲಿಸಿದ್ದಾರೆ ಎಂದರು.

ಬಿಜೆಪಿಯ ಭಿನ್ನಮತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ಎಲ್ಲ ಬೆಳವಣಿಗೆಯನ್ನು ಕೇಂದ್ರದ ನಾಯಕರ ಗಮನಕ್ಕೆ ತರುತ್ತೇನೆ. ಈಗಾಗಲೇ ಕೇಂದ್ರದ ನಾಯಕರು ಇದನ್ನು ಗಮನಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ರಾಜಕೀಯ ಪಕ್ಷವಲ್ಲ. ಆದ್ದರಿಂದ ರಾಜಕೀಯದ ಸಭೆ ಮಾಡುವ ಪದ್ಧತಿ ಸಂಘದಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು.

ಬಳ್ಳಾರಿ ಪಾದಯಾತ್ರೆಗೆ ಕೇಂದ್ರದ ನಾಯಕರು ಒಪ್ಪಿಗೆ ನೀಡಿದರೆ ನಾವು ಕೂಡ ಅದರಲ್ಲಿ ಭಾಗವಹಿಸುತ್ತೇವೆ. ಸಣ್ಣ ಪುಟ್ಟ ವ್ಯತ್ಯಾಸ ಇರುವುದು ನನ್ನ ಗಮನಕ್ಕೂ ಬಂದಿದೆ. ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಮೊದಲಾದವರನ್ನು ಕೇಂದ್ರದ ನಾಯಕರು ಕರೆಸಿ ಈ ಹಿಂದೆಯೂ ಚರ್ಚೆ ಮಾಡಿದ್ದಾರೆ. ಈ ಭಿನ್ನಾಭಿಪ್ರಾಯ ಬಿಟ್ಟು ಒಟ್ಟಾಗಿ ವಿರೋಧ ಪಕ್ಷವಾಗಿ ನಮ್ಮ ಕರ್ತವ್ಯ ಮಾಡುತ್ತೇವೆ. ಜನರು ಕೂಡ ನಮ್ಮಿಂದ ಅದನ್ನೇ ನಿರೀಕ್ಷೆ ಮಾಡುತ್ತಾರೆ ಎಂದರು.

ಸಿ.ಪಿ.ಯೋಗೇಶ್ವರ್‌ ಅವರ ಮನೆಗೆ ಹೋಗಿ ಚರ್ಚೆ ಮಾಡಲಾಗಿದೆ. ಅವರಿಗೆ ಟಿಕೆಟ್‌ ನೀಡುವ ಬಗ್ಗೆ ಎನ್‌ಡಿಎ ನಿರ್ಧಾರ ಮಾಡಬೇಕಿದ್ದು, ಆ ಬಗ್ಗೆಯೂ ಮನವರಿಕೆ ಮಾಡಿಕೊಡುತ್ತೇವೆ. ಬಂಡಾಯ ಸ್ಪರ್ಧೆ ಮಾಡುವುದು ಸರಿಯಲ್ಲ. ಏಕ ಅಭ್ಯರ್ಥಿ ಸ್ಪರ್ಧಿಸುವಂತೆ ಮಾಡಲು ಎಲ್ಲ ಪ್ರಯತ್ನ ಮಾಡುತ್ತೇವೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

14 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

15 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

16 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

16 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

22 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

22 hours ago