ಬಳ್ಳಾರಿ: ರಾಜ್ಯದ ಜನರ ಏಳ್ಗೆಗಾಗಿಯೇ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಅವುಗಳನ್ನು ನಿಲ್ಲಿಸುವುದಿಲ್ಲ ಮುಂದುವರಿಸುತ್ತೇವೆ ಎಂದು ಕಾನೂನು ಸಚಿವ ಹೆಚ್‌ಕೆ ಪಾಟೀಲ್ ತಿಳಿಸದರು.
ಇಂದು (ಫೆ.24) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾವತಿಯಾಗದ ಗೃಹಲಕ್ಷ್ಮೀ ಹಣ ಬಿಡುಗಡೆಗೆ ಸರ್ಕಾರ ಕ್ರಮ ಕೈಗೊಂಡಿದೆ. ಗ್ಯಾರಂಟಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.
ಈಗ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳು ಅದೇ ರೀತಿಯಲ್ಲಿ ಮುಂದುವರಿಯುತ್ತವೆ. ಇದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳಿಗೆ 58 ಸಾವಿರ ಕೋಟಿ ಮೊತ್ತ ಖರ್ಚಾಗುತ್ತಿದೆ. ಇದು ಸಣ್ಣ ಮೊತ್ತ ಅಲ್ಲ. ರಾಜ್ಯದ ಜನರಿಗಾಗಿಯೇ ಈ ಯೋಜನೆಗಳನ್ನು ಪ್ರಾರಂಭ ಮಾಡಿದ್ದೇವೆ. ನಮಗೆ ಬದ್ಧತೆ ಇದೆ, ಮುಂದುವರಿಸುತ್ತೇವೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಗೆ ನಮ್ಮ ಪಕ್ಷದ ಶಾಸಕರೂ ಯಾರು ತಕರಾರು ತೆಗೆದಿಲ್ಲ. ಇವುಗಳ ವಿರುದ್ಧವು ಇಲ್ಲ ಎಂದರು.





