ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ದೂರದೃಷ್ಟಿ ವ್ಯಕ್ತವಾಗಿದೆ ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಜೆಟ್ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾಡಿರುವ ಭಾಷಣದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ರಾಜ್ಯದ ಅಭಿವೃದ್ಧಿ ಹಾಗೂ ಸಮಗ್ರ ಬೆಳವಣಿಗೆಯ ಬಗ್ಗೆ ಹೊಂದಿರುವ ದೂರದೃಷ್ಟಿ ವ್ಯಕ್ತವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಸರ್ಕಾರವು ಐದು ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಭದ್ರತೆಯ ಭಾವನೆ ಒದಗಿಸಿದೆ. ಕಲ್ಯಾಣ ಕಾರ್ಯಕ್ರಮಗಳು ಮತ್ತು ಅಭಿವೃದ್ಧಿಯ ಅನುಷ್ಠಾನ ಎರಡಕ್ಕೂ ಸಿದ್ದರಾಮಯ್ಯ ಒತ್ತು ನೀಡುತ್ತಿರುವುದು ಗಮನಾರ್ಹವಾಗಿದೆ ಎಂದು ಹೇಳಿದರು.





