ರಾಜ್ಯ

ರಾಜ್ಯ ಸ್ರಕಾರ ತಂದಿರುವ ಗ್ಯಾರೆಂಟಿಗಳು ತಾತ್ಕಾಲಿಕ : ಹೆಚ್‌ಡಿಡಿ

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ʼಸೋ ಕಾಲ್ಡ್‌ ಗ್ಯಾರಂಟಿಗಳುʼ ಎಂದು ಕಟುವಾಗಿ ಟೀಕಿಸಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಇಂಥ ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅನಗತ್ಯ ವೆಚ್ಚದ ಅನುತ್ಪಾದಕ, ಅಲ್ಪಾವಧಿ ಲಾಭದ ಗ್ಯಾರಂಟಿಗಳು ಇವಾಗಿವೆ ಎಂದು ಕಾಂಗ್ರೆಸ್‌ ಸರಕಾರದ ಪಂಚ ಗ್ಯಾರಂಟಿಗಳ ಬಗ್ಗೆ ದೇಶದ ಜನರ ಗಮನ ಸೆಳೆದರು.

ಕಾಂಗ್ರೆಸ್‌ ಪಕ್ಷದ ಸದಸ್ಯರ ಆಕ್ಷೇಪಣೆ, ಗದ್ದಲದ ನಡುವೆಯೂ ತಮ್ಮ ಮಾತುಗಳನ್ನು ಮುಂದುವರಿಸಿದ ಅವರು; ಜಂತರ್‌ಮಂತರ್‌ನಲ್ಲಿ ಕಾಂಗ್ರೆಸ್‌ನವರು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಅವರು ನನ್ನನ್ನೂ ಸೇರಿ ಎಲ್ಲರನ್ನೂ ಬರುವಂತೆ ಕರೆದಿದ್ದಾರೆ. ಈ ದೇಶದ ರಾಜಕೀಯ ಪರಿಸ್ಥಿತಿ ಹೇಗಾಗಿದೆ ಎಂದರೆ, ರಾಜಕೀಯ ಲಾಭಕ್ಕಾಗಿ ಅನಗತ್ಯ ವೆಚ್ಚದ ಅನುತ್ಪಾದಕ ವೆಚ್ಚಗಳನ್ನು ಯಥೇಚ್ಛವಾಗಿ ಮಾಡಲಾಗುತ್ತಿದೆ. ನಾನೆಂದೂ ಇಂಥದ್ದನ್ನು ಮಾಡಿಲ್ಲ ಎಂದರು.

andolanait

Recent Posts

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆಹಾರ ರೈಸ್‌ಮಿಲ್‌ನಲ್ಲಿ ಪತ್ತೆ

ಕೆ.ಆರ್‌.ಪೇಟೆ: ತಾಲ್ಲೂಕಿನ ಕಾಪನಹಳ್ಳಿ ಗವಿಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿದ ಆಹಾರದ ದಾಸ್ತಾನು ರೈಸ್‌ಮಿಲ್‌ನಲ್ಲಿ ಪತ್ತೆಯಾಗಿದೆ. ಮಾರ್ಚ್.‌17ರಂದು ರೈತ…

21 seconds ago

ಮುಂದುವರಿದ ಇರಾನ್‌-ಇಸ್ರೇಲ್‌ ಸಂಘರ್ಷ: ಕಚ್ಚಾ ತೈಲದ ಬೆಲೆ ಏರಿಕೆ ಸಾಧ್ಯತೆ

ರಿಯಾದ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು, ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದನಾ ರಾಷ್ಟ್ರವಾದ ಸೌದಿ ಅರೇಬಿಯಾದ ತೈಲ…

20 mins ago

ಇರಾನ್-ಇಸ್ರೇಲ್‌ ಸಂಘರ್ಷ: 9 ವಾಯುಪ್ರದೇಶಗಳಲ್ಲಿ ವಿಮಾನ ಹಾರಾಟ ನಡೆಸದಂತೆ DGCA ಸೂಚನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ಗಲ್ಪ್ ಪ್ರದೇಶದಲ್ಲಿನ 9 ವಾಯು ಪ್ರದೇಶಗಳಲ್ಲಿ ಹಾರಾಟ…

30 mins ago

ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ರ ಪರಿಷ್ಕೃತವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಏ.25…

37 mins ago

ಶಿವಮೊಗ್ಗ| ತಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಾವು: ಸಚಿವ ಈಶ್ವರ್‌ ಖಂಡ್ರೆ ಸಂತಾಪ

ಬೆಂಗಳೂರು: ಶಿವಮೊಗ್ಗದ ತಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಯಿಂದ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು…

46 mins ago

ರೀಲ್ಸ್‌ ತಂದ ಆಪತ್ತು: ಅಪಘಾತದಲ್ಲಿ ಬಾಲಕ ಸಾವು

ಹುಬ್ಬಳ್ಳಿ: ಸಾಮಾಜಿಕ ಜಾಲತಾಣಗಳಲ್ಲಿ ‘ರೀಲ್ಸ್’ ಮಾಡಲು ಹೋಗಿ 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ…

1 hour ago