Mysore
34
scattered clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

ಬಿಜೆಪಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಗ್ಯಾರೆಂಟಿಗಳು ರದ್ದು: ಡಿಕೆ ಶಿವಕುಮಾರ್‌

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ತಂದಿರುವ ಪಂಚ ಗ್ಯಾರೆಂಟಿ ಯೋಜನೆಗಳನ್ನು ಬಿಜೆಪಿ-ಕೆಡಿಎಸ್‌ ಪಕ್ಷಗಳು ವಿರೋಧಿಸುತ್ತಿವೆ. ಲೋಕಸಭಾ ಚುನಾವಣೆಯಲ್ಲಿ ಬಜಿಪಿ-ಜೆಡಿಎಸ್‌ ಮಿತ್ರ ಪಕ್ಷ ಜಯಿಸಿದರೆ ರಾಜ್ಯದಲ್ಲಿ ಜಾರಿಯಲ್ಲಿರವ ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆಗಳನ್ನು ರುದ್ದು ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಪ್ರಿಪಕ್ಷಗಳ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳು ಗ್ಯಾರೆಂಟಿ ಯೋಜನೆಗಳನ್ನು ವಿರೋಧಿಸುತ್ತಲೇ ಬರುತ್ತಿವೆ. ಅವರು ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆ ರದ್ದುಗೊಳಿಸುವ ಕಾಯ್ದೆಗೆ ಅನುಮೋದನೆ ನೀಡಬಹುದು. ಈ ಎಲ್ಲಾ ವಿಚಾರಗಳನ್ನು ಮುತದಾರರ ಬಳಿಗೆ ಕೊಂಡೊಯ್ಯಬೇಕು ಮತ್ತು ಇಂತಹ ವಿಚಾರಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಪುನರುಚ್ಚರಿಸಿದ ಡಿಸಿಎಂ, ಪ್ರಧಾನಿ ಮೋದಿಯವರು ಕಾಂಗ್ರೆಸ್‌ ಪರಿಕಲ್ಪನೆಯನ್ನು ಎರವಲು ಪಡೆಯುವ ಮೂಲಕ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಗ್ಯಾರಂಟಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಶಿವಕುಮಾರ್, ಬಿಜೆಪಿ ಯಾರನ್ನಾದರೂ ತಮ್ಮ ಪಕ್ಷದ ಅಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲಿ. ನಾವು ಅದರ ಬಗ್ಗೆ ಚಿಂತಿಸುವುದಿಲ್ಲ. ನಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ” ಎಂದರು. ಕಾಂಗ್ರೆಸ್ ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ನಾಯಕರು ಗ್ಯಾರಂಟಿ ಯೋಜನೆಗಳನ್ನು ಪಡೆದುಕೊಳ್ಳುವಲ್ಲಿ ಜನರು ಎದುರಿಸುತ್ತಿರುವ ಅನಾನುಕೂಲತೆಗಳ ಬಗ್ಗೆ ಪಕ್ಷದ ನಾಯಕತ್ವಕ್ಕೆ ತಿಳಿಸಬೇಕು ಎಂದು ಅವರು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ