ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಆತಂಕ ಇರುವ ಹಿನ್ನೆಲೆ ಹೊಸ ವರ್ಷ ಆಚರಣೆಯಲ್ಲಿ ಅಧಿಕ ಜಾಗ್ರತೆ ವಹಿಸುವಂತೆ ಈಗಾಗಲೇ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಜೊತೆಗೆ ಕೋವಿಡ್ ಸೋಂಕಿತ ವ್ಯಕ್ತಿಗಳಿಗೆ ಕೆಲವು ಮಾರ್ಗಸೂಚಿಗಳನ್ನು ಕಡ್ಡಾಯಗೊಳಿಸಲಾಗಿದೆ.
ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೊರೊನಾ ಸೋಂಕಿತ ವ್ಯಕ್ತಿಗಳು ಕಡ್ಡಾಯವಾಗಿ 7 ದಿನ ಹೋಂ ಐಸೊಲೇಷನ್ ನಲ್ಲಿ ಇರುವಂತೆ, ಹಾಗೆ ಮಾಸ್ಕ್ ಬಳಕೆ ಸೇರಿದಂತೆ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಕೋವಿಡ್ ಸಂಬಂಧಿತ ಸಭೆ ಬಳಿಕ ಮಾತನಾಡಿದ ಅವರು ಹೊಸ ವರ್ಷಕ್ಕೆ ಯಾವುದೇ ನಿರ್ಬಂಧ ಇಲ್ಲ ಆದರೆ ಜನರೇ ಹೆಚ್ಚು ದಟ್ಟಣೆ ಇರುವ ಜಾಗದಲ್ಲಿ ಸೇರದೇ ಇರುವಂತೆ ಜಾಗೃತೆ ವಹಿಸಿ.
ಕೆಮ್ಮು, ಜ್ವರ, ನೆಗಡಿ ಕಾಣಿಸಿಕೊಂಡರೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ , ಉದ್ಯೋಗಿಗಳಿಗೂ ಕಡ್ಡಾಯ ರಜೆ ನೀಡಿ ಎಂದು ಸೂಚನೆ ನೀಡಿದ್ದಾರೆ.
ಹೊರಗಡೆ ಓಡಾಡುವಾಗ ಮಾಸ್ಕ್ ಧರಿಸಿ, ಶುಚಿತ್ವ ಕಾಪಾಡಿಕೊಳ್ಳಿ , ರೋಗ ಲಕ್ಷಣಗಳನ್ನು ಕಡೆಗಣಿಸಬೇಡಿ. ಜೆಎನ್.1 ಉಪತಳಿ ರಾಜ್ಯದಲ್ಲಿ ಹರಡುವ ಆತಂಕ ಹೆಚ್ಚಿದೆ.
ಈಗಾಗಲೇ ಟೆಸ್ಟಿಂಗ್ ಹೆಚ್ಚಿಸಿದ್ದು 436 ಪಾಸಿಟಿವ್ ಪ್ರಕರಣದಗಳು ರಾಜ್ಯದಲ್ಲಿ ಇದೆ. ಹೆಚ್ಚುವರಿ ಆಕ್ಸಿಜನ್ ಕಂಟೈನರ್ , ವ್ಯಾಕ್ಸಿನ್ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಸಚಿವರು ಈ ವೇಳೆ ಹೇಳಿದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…