Mysore
23
overcast clouds

Social Media

ಮಂಗಳವಾರ, 24 ಜೂನ್ 2025
Light
Dark

ಡೆಂಗ್ಯೂ ಹೆಚ್ಚಳ: ಮುನ್ನೆಚ್ಚರಿಕೆ ಕ್ರಮಕ್ಕೆ ಗ್ರಾ.ಪಂಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಲ್ಲದೆ ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರವಾಗಿ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದ್ದಾರೆ.

ಕುಡಿಯುವ ನೀರಿನ ಸರಬರಾಜು ಟ್ಯಾಂಕ್‌ ಗಳು, ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನ ವಾರಕ್ಕೊಮ್ಮೆ ಶುಚಿಗೊಳಿಸಿ ಗ್ರಾಮೀಣ ಭಾಗದ ಮನೆಗಳು –ಅಂಗಡಿ ಮುಂಗಟ್ಟುಗಳು, ಹೋಟೆಲ್ಗಳು, ವಾಣಿಜ್ಯ ಸಂಕೀರ್ಣಗಳು ಮತ್ತು ಖಾಲಿ ಜಾಗದಲ್ಲಿ ನೀರು ಧೀರ್ಘಕಾಲ ನಿಲ್ಲದಂತೆ ಕ್ರಮವಹಿಸಬೇಕು, ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ.

ಅಲ್ಲದೆ ಗ್ರಾಮಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಕಟ್ಟಿಸಿರುವ ತೊಟ್ಟಿಗಳನ್ನ ವಾರಕ್ಕೊಮ್ಮೆ ಕಡ್ಡಾಯವಾಗಿ ಸ್ವಚ್ಛಗೊಳಿಸಬೇಕು. ಖಾಲಿ ನಿವೇಶನಗಳ ಘನತ್ಯಾಜ್ಯ ವಸ್ತುಗಳನ್ನ ಮತ್ತ ಮಳೆ ನೀರು ಸಂಗ್ರಹವಾಗದಂತೆ ಕ್ರಮವಹಿಸಲು ನಿವೇಶನಗಳ ಮಾಲೀಕರಿಗೆ ಸಚಿವರು  ಸೂಚನೆ ನೀಡಿದ್ದಾರೆ. ಒಂದು ವೇಳೆ ಸೂಚನೆ ಪಾಲಿಸದವರಿಗೆ ನಿಯಮಾನುಸಾರ ದಂಡ ವಿಧಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

Tags:
error: Content is protected !!