ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಲ್ಲದೆ ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರವಾಗಿ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದ್ದಾರೆ.
ಕುಡಿಯುವ ನೀರಿನ ಸರಬರಾಜು ಟ್ಯಾಂಕ್ ಗಳು, ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನ ವಾರಕ್ಕೊಮ್ಮೆ ಶುಚಿಗೊಳಿಸಿ ಗ್ರಾಮೀಣ ಭಾಗದ ಮನೆಗಳು –ಅಂಗಡಿ ಮುಂಗಟ್ಟುಗಳು, ಹೋಟೆಲ್ಗಳು, ವಾಣಿಜ್ಯ ಸಂಕೀರ್ಣಗಳು ಮತ್ತು ಖಾಲಿ ಜಾಗದಲ್ಲಿ ನೀರು ಧೀರ್ಘಕಾಲ ನಿಲ್ಲದಂತೆ ಕ್ರಮವಹಿಸಬೇಕು, ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ.
ಅಲ್ಲದೆ ಗ್ರಾಮಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಕಟ್ಟಿಸಿರುವ ತೊಟ್ಟಿಗಳನ್ನ ವಾರಕ್ಕೊಮ್ಮೆ ಕಡ್ಡಾಯವಾಗಿ ಸ್ವಚ್ಛಗೊಳಿಸಬೇಕು. ಖಾಲಿ ನಿವೇಶನಗಳ ಘನತ್ಯಾಜ್ಯ ವಸ್ತುಗಳನ್ನ ಮತ್ತ ಮಳೆ ನೀರು ಸಂಗ್ರಹವಾಗದಂತೆ ಕ್ರಮವಹಿಸಲು ನಿವೇಶನಗಳ ಮಾಲೀಕರಿಗೆ ಸಚಿವರು ಸೂಚನೆ ನೀಡಿದ್ದಾರೆ. ಒಂದು ವೇಳೆ ಸೂಚನೆ ಪಾಲಿಸದವರಿಗೆ ನಿಯಮಾನುಸಾರ ದಂಡ ವಿಧಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…