ಬೆಂಗಳೂರು : ಶ್ರೀಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಸಿಎಂ, ‘ಶ್ರೀಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ’ ಎಂದು ಬರೆದುಕೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್‌ನಲ್ಲಿ ಏನಿದೆ?
“ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ.
ಸಾವಿರಾರು ಮಂದಿ ಠೇವಣಿದಾರರು ತಮ್ಮ ನಿವೃತ್ತಿ ಜೀವನಕ್ಕೆ ಆಧಾರವಾಗಲೆಂದು, ಮಕ್ಕಳ ಮದುವೆ, ಸ್ವಂತ ಮನೆ ಖರೀದಿ ಮುಂತಾದ ಕನಸುಗಳನ್ನು ಇಟ್ಟುಕೊಂಡು ತಮ್ಮ ಜೀವಮಾನದ ಉಳಿತಾಯವನ್ನೆಲ್ಲ ಬ್ಯಾಂಕಿನಲ್ಲಿ ಹೂಡಿಕೆ ಮಾಡಿದ್ದರು. ಬ್ಯಾಂಕಿನವರ ವಂಚನೆಯಿಂದಾಗಿ ಅವರೆಲ್ಲರೂ ಮುಂದಿನ ತಮ್ಮ ಜೀವನದ ಬಗ್ಗೆ ದಿಕ್ಕು ತೋಚದಂತಾಗಿದ್ದಾರೆ.
ವಂಚನೆಗೊಳಗಾದ ಠೇವಣಿದಾರರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಈ ಹಿಂದೆ ಪ್ರತಿಪಕ್ಷ ನಾಯಕನಾಗಿದ್ದ ಸಂದರ್ಭದಲ್ಲಿಯೂ ಸದನದ ಒಳಗೆ ಮತ್ತು ಹೊರಗೆ ಧ್ವನಿಯೆತ್ತಿದ್ದೆ, ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದೆ. ಆಗಲೂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬುದು ನಮ್ಮ ಒತ್ತಾಯವಾಗಿತ್ತು.
ಠೇವಣಿ ಹಣ ಕಳೆದುಕೊಂಡವರ ಹತಾಶೆ, ಸಂಕಟವನ್ನು ಕಣ್ಣಾರೆ ಕಂಡಿದ್ದೇನೆ. ಈ ಕಾರಣಕ್ಕಾಗಿ ಸೂಕ್ತ ತನಿಖೆ ನಡೆದು, ಎಲ್ಲ ಸಂತ್ರಸ್ತರಿಗೂ ನ್ಯಾಯ ಸಿಗಲಿ ಎಂಬ ಉದ್ದೇಶದಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುತ್ತಿದ್ದೇನೆ”. ಎಂದು ಟ್ವೀಟ್ ಮಾಡಿದ್ದಾರೆ.
ಏನಿದು ಹಗರಣ..? : ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿರುವ ಆರೋಪ ಗುರು ರಾಘವೇಂದ್ರ ಬ್ಯಾಂಕ್ ಮೇಲಿದೆ. ಬ್ಯಾಂಕ್ ಸುಳ್ಳು ಸಾಲಗಾರರ ಖಾತೆ ತೆರದು ಅಕ್ರಮವಾಗಿ ಹಣವನ್ನು ವರ್ಗಾವಣೆ ಮಾಡಿದೆ. 2022ರ ಫೆಬ್ರವರಿ ತಿಂಗಳಿನಲ್ಲಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅಧಿಕಾರಿಯೊಬ್ಬರನ್ನು ಅಕ್ರಮ ಹಣ ವರ್ಗಾವಣೆ ಆರೋಪಡಿ ಜಾರಿ ನಿರ್ದೇಶನಾಲಯ ಬಂಧಿಸಿತು. ಪ್ರಕರಣ ಸಂಬಂಧ ಇದುವರೆಗೆ ಸಂಸ್ಥೆಯ ಅಧ್ಯಕ್ಷ ಸೆರಿದಂತೆ 4 ಮಂದಿಯನ್ನು ಬಂಧಿಸಲಾಗಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಸಿಬಿಐಗೆ ಈ ಹಗರಣದ ತನಿಖೆಯನ್ನು ಒಪ್ಪಿಸುವುದಾಗಿ ಈ ಹಿಂದೆ ಹೇಳಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…