ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಹಿರಂಗ ಹೇಳಿಕೆ ನೀಡದಂತೆ ಸಚಿವರು ಮತ್ತು ಶಾಸಕರಿಗೆ ಖಡಕ್ ವಾರ್ನಿಂಗ್ ನೀಡಿದ್ದು ಸರಿಯಾಗಿಯೇ ಇದೆ. ಈಗ ಎಲ್ಲರೂ ಅವರ ಮಾತನ್ನು ಪಾಲಿಸಬೇಕಿದೆ ಎಂದು ಖರ್ಗೆ ಅವರ ಹೇಳಿಕೆಯನ್ನು ಜಿಲ್ಲಾ ಉಸ್ತುವಾರಿ ಎಚ್.ಸಿ.ಮಹದೇವಪ್ಪ ಸಮರ್ಥಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಜನವರಿ.18) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಶಿಸ್ತಿನಿಂದ ಪಕ್ಷವನ್ನು ಸಂಘಟನೆ ಮಾಡಿ, ಸರ್ಕಾರಕ್ಕೆ ಒಳ್ಳೆಯ ಹೆಸರು ತರುವ ಕೆಲಸ ಮಾಡಬೇಕಿದೆ ಎಂದಿದ್ದಾರೆ. ಅವರು ಎಐಸಿಸಿ ವರಿಷ್ಠರಾಗಿದ್ದು, ನೀಡಿರುವ ಹೇಳಿಕೆ ನೂರಕ್ಕೆ ನೂರು ಸರಿಯಾಗಿದೆ. ಹೀಗಾಗಿ ಪಕ್ಷದಲ್ಲಿ ಎಲ್ಲರೂ ಅವರ ಮಾತನ್ನು ಪಾಲಿಸಲೇಬೆಕು ಎಂದರು.
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಏನು?
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ರಾಜ್ಯದ ಸಚಿವರು ಹಾಗೂ ಶಾಸಕರೆಲ್ಲರೂ ಬಹಿರಂಗವಾಗಿ ಹೇಳಿಕೆ ನೀಡದೆ ಸರ್ಕಾರ ಮತ್ತು ಪಕ್ಷ ವಹಿಸಿದ ಕೆಲಸವನ್ನು ಶ್ರದ್ಧೆಯಿಂದ ಮಾಡಬೇಕು ಎಂದು ನಿನ್ನೆ(ಜ.17) ಹೇಳಿಕೆ ನೀಡಿದ್ದರು.