ಹಾಸನ: ಶೋಷಿತ ವರ್ಗಗಳ ಒಕ್ಕೂಟ ಹಾಗೂ ಕೆಪಿಸಿಸಿ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 5 ರಂದು ನಡೆಯಲಿರುವ ಸ್ವಾಭಿಮಾನಿ ಸಮಾವೇಶವೂ ದೇಶದ ಸಂವಿಧಾನ ಸಂರಕ್ಷಣೆ, ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ನಡೆಸುವ ಸಮಾವೇಶವಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು.
ಈ ಕುರಿತು ಹಾಸನದಲ್ಲಿ ಇಂದು(ನ.29) ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶೋಷಿತ ಸಮುದಾಯಗಳ ಒಕ್ಕೂಟದ ಜನರು ಹಾಸನದಲ್ಲಿ ಸ್ವಾಭಿಮಾನಿ ಸಮಾವೇಶ ಮಾಡಬೇಕೆಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಸಮಾವೇಶವನ್ನು ನಡೆಸಲಾಗುತ್ತಿದೆ. ಈ ಸಮಾವೇಶವನ್ನು ಮುಖ್ಯವಾಗಿ ಕೋಮುವಾದ ಹಾಗೂ ಮತೀಯವಾದವನ್ನು ಅಳಿಸಿ, ಸಂವಿಧಾನ ಸಂರಕ್ಷಣೆ ಮಾಡಿ ಪ್ರಜಾಪ್ರಭುತ್ವವನ್ನು ಬಲವರ್ಧನೆಗೊಳಿಸಬೇಕೆಂಬುದಾಗಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರು ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ಶೋಷಿತ ವರ್ಗಗಳ ಪರವಾಗಿ ಹೋರಾಟ ಮಾಡಿದವರಾಗಿದ್ದಾರೆ. ಹೀಗಾಗಿ ಕಾಂಗ್ರೆಸ್ ಹಾಗೂ ಶೊಷಿತ ವರ್ಗಗಳ ಸಮುದಾಯಗಳ ಒಕ್ಕೂಟ ಸೇರಿ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.
ಕಾಂಗ್ರೆಸ್‌ನ ಹೋರಾಟಗಳು ಮತ್ತು ಶೋಷಿತ ವರ್ಗಗಳ ಸೈದ್ಧಾಂತಿಕ ವಿಚಾರಗಳ ಹೋಲಿಕೆಯಾಗಿರುವುದರಿಂದ ಸಮಾವೇಶವನ್ನು ನಡೆಸಬೇಕೆಂದು ತೀರ್ಮಾನಿಸಲಾಗಿದೆ. ಈ ಸಮಾವೇಶದಲ್ಲಿ ಕಾಂಗ್ರೆಸ್ ಸಚಿವರು, ಶಾಸಕರು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದರು.
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…
ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…
ಮಂಡ್ಯ : ಕಳೆದ 2024ರಲ್ಲಿ ಬೂದನೂರು ಉತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗಿತ್ತು. ಸದರಿ ವರ್ಷವೂ ಸಹ ಅದ್ಧೂರಿಯಾಗಿ ಉತ್ಸವವನ್ನು ಆಚರಿಸಲಾಗುವುದು ಎಂದು…
ಮೈಸೂರು : ಚಲನಚಿತ್ರಗಳು, ಧಾರಾವಾಹಿಗಳು, ಟಿವಿ ಕಾರ್ಯಕ್ರಮಗಳು, ಜಾಹೀರಾತುಗಳು ಹಾಗೂ ಇತರ ವಾಣಿಜ್ಯ ಶ್ರವಣ-ದೃಶ್ಯ ಮಾಧ್ಯಮಗಳಲ್ಲಿ ಮಕ್ಕಳು (ಬಾಲ ಕಲಾವಿದರು)…