ರಾಜ್ಯ

ದೇವೇಗೌಡರು ಕೇಂದ್ರ ಸರ್ಕಾರದ ವಕ್ತಾರರಂತೆ ವರ್ತಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬಿಜೆಪಿ ಹಾಗೂ ನರೇಂದ್ರ ಮೋದಿಯವರ ಚಿಯರ್‌ ಲೀಡರ್‌ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಟೀಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರದಲ್ಲಿ ಯಾವ ಪಕ್ಷದ ಸರ್ಕಾರ ಇದ್ದರೂ ನೀವು ಮುಲಾಜಿಗೆ ಬೀಳದೆ ಕರ್ನಾಟಕದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ದನಿ ಎತ್ತುತ್ತಾ ಬಂದವರು. ಆ ಮುತ್ಸದ್ದಿ ದೇವೇಗೌಡರನ್ನು ಕಾಣಲು ಕನ್ನಡಿಗರು ಬಯಸುತ್ತಿದ್ದಾರೆ. ಆದರೆ ಈಗಿನ ದೇವೇಗೌಡರು ಬಿಜೆಪಿ ಮತ್ತು ನರೇಂದ್ರ ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ ಎಂದು ವ್ಯಂಗ್ಯವಾಡಿದರು.

ದೈಹಿಕವಾಗಿ ನೀವು ಸ್ವಲ್ಪ ಕುಗ್ಗಿದಂತೆ ಕಂಡರೂ ಮಾನಸಿಕವಾಗಿ ನೀವಿನ್ನೂ ದೃಡವಾಗಿದ್ದೀರಿ. ದಯವಿಟ್ಟು ಈಗಲಾದರೂ ಪಕ್ಷ ರಾಜಕಾರಣವನ್ನು ಮೀರಿ ಒಬ್ಬ ಮುತ್ಸದ್ದಿ ನಾಯಕನ ರೀತಿಯಲ್ಲಿ ಕನ್ನಡ, ಕನ್ನಡಿಗ ಹಾಗೂ ಕರ್ನಾಟಕದ ಹಿತ ರಕ್ಷಣೆಗೆ ಮುಂದಾಗಬೇಕೆಂದು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಈ ನಿಟ್ಟಿನಲ್ಲಿ ನೀವು ಮಾಡುವ ಪ್ರಯತ್ನಕ್ಕೆ ನಮ್ಮ ಸರ್ಕಾರದ ಸಂಪೂರ್ಣ ಬೆಂಬಲ ಇದೆ. ಏಳು ಕೋಟಿ ಕನ್ನಡಿಗರೂ ನಿಮ್ಮ ಜೊತೆಯಲ್ಲಿ ಇರುತ್ತಾರೆ ಎಂಬ ಭರವಸೆಯೂ ನನಗಿದೆ.

ಹಿಂದೆಲ್ಲ ರಾಜ್ಯದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ಒಬ್ಬ ಮುತ್ಸದ್ದಿಯಾಗಿ ಇದಕ್ಕಿಂತಲೂ ಮುಖ್ಯವಾಗಿ ಒಬ್ಬ ಹೆಮ್ಮೆಯ ಕನ್ನಡಿಗನಾಗಿ ರಾಜ್ಯಕ್ಕೆ ನ್ಯಾಯ ಕೊಡಲು ನೀವು ಹೋರಾಟ ನಡೆಸಿದ್ದನ್ನು ರಾಜ್ಯದ ಜನರು ಗಮನಿಸಿದ್ದಾರೆ. ಆದರೆ ಇತ್ತೀಚೆಗೆ ನೀವು ಮತ್ತು ನಿಮ್ಮ ಪಕ್ಷ ಕೇಂದ್ರ ಸರ್ಕಾರದ ವಕ್ತಾರರಂತೆ ಪಕ್ಷಪಾತಿಯಾಗಿ ವರ್ತಿಸುತ್ತಿರುವುದನ್ನು ಕೂಡಾ ನನ್ನನ್ನೂ ಸೇರಿದಂತೆ ಏಳು ಕೋಟಿ ಕನ್ನಡಿಗರು ಗಮನಿಸುತ್ತಿದ್ದಾರೆ. ಕೇಂದ್ರ ಸಂಪುಟದಲ್ಲಿ ಮಗನನ್ನು ಸಚಿವನನ್ನಾಗಿ ಮಾಡಲು ಗೌಡರು ಇಷ್ಟೊಂದು ರಾಜಿ ಮಾಡಿಕೊಳ್ಳುವ ಅಗತ್ಯ ಇತ್ತಾ? ಎಂದು ಜನ ಪ್ರಶ್ನಿಸುತ್ತಿದ್ದಾರೆ.

ನೀರಾವರಿ ವಿಚಾರದಲ್ಲಿ ನ್ಯಾಯ ಪಕ್ಷಪಾತಿಯಾಗಿ ಕರ್ನಾಟಕದ ಹಿತಾಸಕ್ತಿಯ ರಕ್ಷಣೆ ಮಾಡಬೇಕಾಗಿದ್ದ ಕೇಂದ್ರದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಸತತವಾಗಿ ಕನ್ನಡಿಗರ ಹಿತವನ್ನು ಬಲಿಗೊಡಲು ಹೊರಟಿರುವುದನ್ನು ಸನ್ಮಾನ್ಯ ದೇವೇಗೌಡರಿಗೆ ನಾನು ಬಿಡಿಸಿ ಹೇಳಬೇಕಾಗಿಲ್ಲ ಎಂದು ಹೇಳಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…

33 mins ago

ಸರಗೂರು: ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಿದ್ಧತೆ

ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…

41 mins ago

ವಿಧಾನಸಭೆಯಲ್ಲಿ ಅಚ್ಚರಿಯ ಪ್ರಸಂಗ: ಸ್ಪೀಕರ್‌ ಯು.ಟಿ.ಖಾದರ್‌ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್‌ ಯು.ಟಿ.ಖಾದರ್‌ ಅವರು…

44 mins ago

ಮೈಸೂರಿನ ಫುಟ್‌ಪಾತ್‌ನಲ್ಲಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ: ಪಾಲಿಕೆ ನಡೆಗೆ ಸಾರ್ವಜನಿಕರ ಆಕ್ರೋಶ

ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…

1 hour ago

ಒಳಮೀಸಲಾತಿ ವಿಚಾರದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…

2 hours ago

ಮಹದೇಶ್ವರ ಬೆಟ್ಟ: ಪಾದಯಾತ್ರಿಕರಿಗೆ ಭಯ ಹುಟ್ಟಿಸಿದ ಕಾಡಾನೆಗಳ ಹಿಂಡು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

2 hours ago