Mysore
18
broken clouds

Social Media

ಬುಧವಾರ, 31 ಡಿಸೆಂಬರ್ 2025
Light
Dark

ಬಿ.ಎಲ್.ಸಂತೋಷ್ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮೆಚ್ಚುಗೆ

ಬೆಂಗಳೂರು: ಸಂತೋಷ್ ಅವರು ಯಾವುದೇ ಅಧಿಕಾರಕ್ಕೆ ಆಸೆಪಟ್ಟವರಲ್ಲ. ನಿಸ್ವಾರ್ಥದಿಂದ ಪಕ್ಷ ಕಟ್ಟುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಾಜಪೇಯಿ ಅವರ ಜನ್ಮಶತಾಬ್ದಿ ಅಂಗವಾಗಿ ಬೆಂಗಳೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸುಶಾಸನ ದಿನಾಚರಣೆ ಕಾರ್ಯಕ್ರಮದಲ್ಲಿ ಅಟಲ್ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು.

ಸಭೆಯಲ್ಲಿ ತಮಗೂ ಮೊದಲು ಭಾಷಣ ಮಾಡಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ಮಾತುಗಳನ್ನು ಬಹುವಾಗಿ ಮೆಚ್ಚಿಕೊಂಡ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಸಂತೋಷ್ ಅವರು ಯಾವುದೇ ಅಧಿಕಾರಕ್ಕೆ ಆಸೆಪಟ್ಟವರಲ್ಲ. ಕೇಂದ್ರ, ರಾಜ್ಯದಲ್ಲಿ ಮಂತ್ರಿ ಆಗಬೇಕು ಎಂದು ಆಸೆಪಟ್ಟವರಲ್ಲ. ನಿಸ್ವಾರ್ಥದಿಂದ ಪಕ್ಷ ಕಟ್ಟುತ್ತಿದ್ದಾರೆ. ಮೊದಲ ಬಾರಿಗೆ ನಿಮ್ಮ ಭಾಷಣ ಕೇಳಿದ್ದೇನೆ. ಪ್ರಜಾಪ್ರಭುತ್ವದ ಬಗ್ಗೆ, ಮೋದಿ, ಶಾ ಅವರ ಬಗ್ಗೆ ಎದುರಾಳಿಗಳು ಮಾತನಾಡುತ್ತಾರೆ. ಅವರ ಮಾತು ಪೊಳ್ಳು. ಅದಕ್ಕೆ ಬೆಲೆ ಇಲ್ಲ ಎನ್ನುವುದನ್ನು ಜನರ ಮನ ಮುಟ್ಟುವಂತೆ ಮಾತಾಡಿದ್ದೀರಿ. ಮೊದಲ ಬಾರಿಗೆ ನಿಮ್ಮ ಜೊತೆ ನಾನು ವೇದಿಕೆ ಹಂಚಿಕೊಂಡಿದ್ದೇನೆ. ನಿಮ್ಮಲ್ಲಿ ಏನು ಶಕ್ತಿ ಇದೆ ಎಂದು ಅರ್ಥ ಮಾಡಿಕೊಂಡಿದ್ದೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ನಿವೃತ್ತ ಐಎಎಸ್ ಅಧಿಕಾರಿ ಮದನ ಗೋಪಾಲ್, ಉನ್ನತ ಶಿಕ್ಷಣ ಮಂಡಳಿಯ ಮಾಜಿ ಅಧ್ಯಕ್ಷ ತಿಮ್ಮೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.

 

Tags:
error: Content is protected !!