ರಾಜ್ಯ

ಮನಮೋಹನ್‌ ಸಿಂಗ್‌ ನಿಧನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಂದ ಶ್ರದ್ಧಾಂಜಲಿ

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಗುರುವಾರ ತಡರಾತ್ರಿ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಬೆಂಗಳೂರಿನ ಜೆ.ಪಿ ಭವನದ ಜೆಡಿಎಸ್ ಕಚೇರಿಯಲ್ಲಿ ಇಂದು(ಡಿಸೆಂಬರ್‌.27) ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಮನಮೋಹನ್‌ ಸಿಂಗ್‌ರ ನಿಧನ ಈ ದೇಶಕ್ಕೆ ತುಂಬಲಾರದ ನಷ್ಟ. ನಾನು ಅವರನ್ನು ಮೊದಲ ಬಾರಿಗೆ ಭೇಟಿಯಾಗಿದ್ದು 1991ರಲ್ಲಿ ಆಗ ಅವರು ವಿಶ್ವಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಭಾರತ ದೇಶಕ್ಕೆ ಅವರು 2 ಬಾರಿ ಪ್ರಧಾನಿಯಾಗಿ ಸುರ್ದೀಘ ಸೇವೆ ಸಲ್ಲಿಸಿದ್ದಾರೆ. ಅವರ ಅಗಲಿಕೆಯಿಂದ ನನಗೆ ವೈಯಕ್ತಿಕವಾಗಿ ಬೇಸರ ತಂದಿದೆ. ಅವರ ಆತ್ಮಕ್ಕೆ ಭಗವಂತ ಮೋಕ್ಷ ಕೊಡಲಿ. ಅವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ನಾನು ಕರ್ನಾಟಕದಿಂದ ಮೊದಲ ಬಾರಿ ಲೋಕಸಭೆಗೆ ಪ್ರವೇಶಿಸಿದಾಗ ಸಿಂಗ್‌ ಅವರು ನರಸಿಂಹ ರಾವ್ ಸರ್ಕಾರದಲ್ಲಿ ಹಣಕಾಸು ಮಂತ್ರಿಯಾಗಿದ್ದರು. ಅಲ್ಲದೇ ಅವರು ಅನೇಕ ಹುದ್ದೆಗಳನ್ನು ಅಲಂಕರಿಸಿದ್ದರು. ಇನ್ನೂ ನಮ್ಮ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೆಲಸ ಮಾಡಿದ್ದಾರೆ. ಆರ್ಥಿಕ ತಜ್ಞರಾಗಿ ವಿಶ್ವ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿ ಆರ್ಥಿಕ ಬುದ್ಧಿವಂತರಾಗಿದ್ದರು ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

3 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

8 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

9 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

10 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

11 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

16 hours ago