Mysore
19
few clouds
Light
Dark

ಎಚ್‌ಡಿಕೆ ಕೆಲಸ ಮಾಡಿಲ್ಲವೆನ್ನುವುದಕ್ಕೆ ಆ 10 ಸಾವಿರ ಅರ್ಜಿಗಳೇ ಸಾಕ್ಷಿ: ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ಶಾಸಕರಾಗಿದ್ದ ಚನ್ನಪಟ್ಟಣದಲ್ಲಿ ಜನರು ತಮ್ಮ ಕುಂದುಕೊರತೆಗಳ ಬಗ್ಗೆ ೧೦ ಸಾವಿರ ಅರ್ಜಿಗಳನ್ನು ಕೊಟ್ಟಿದ್ದಾರೆ. ಕುಮಾರಸ್ವಾಮಿ ಅವರು ಜನರ ಪರ ಕೆಲಸ ಮಾಡಿಲ್ಲ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ಕೊಟ್ಟಿದ್ದಾರೆ.

ಮಂಡ್ಯದ ಜನತಾದರ್ಶನದಲ್ಲಿ ಮೂರುವರೆ ಸಾವಿರ ಅರ್ಜಿಗಳನ್ನು ಸ್ವೀಕಾರ ಮಾಡಿದ್ದೇನೆ. ಈ ಮೂಲಕ ಸರ್ಕಾರ ಜನರ ಸಮಸ್ಯೆ ನಿವಾರಿಸುವಲ್ಲಿ ವಿಫಲವಾಗಿದೆ. ಸಚಿವರು, ಶಾಸಕರು ಕೆಲಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಡಿಕೆಶಿ ಟಾಂಗ್‌ ಕೊಟ್ಟಿದ್ದಾರೆ.

ಕುಮಾರಸ್ವಾಮಿ ಅವರು ಏನೋ ಒಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ತಮ್ಮ ಸಮಸ್ಯೆಗಳ ನಿವಾರಣೆಗೆ ಚನ್ನಪಟ್ಟಣದ ಜನರು ಸಾವಿರಾರು ಅರ್ಜಿ ಕೊಟ್ಟಿರುವುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ದೂರವಾಣಿ ಸಂಖ್ಯೆಯಿದೆ. ಇದಕ್ಕೆ ಏನು ಹೇಳಬೇಕು ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಒಬ್ಬರೇ ರಾಜಕಾರಣ ಮಾಡುತ್ತಿದ್ದಾರಾ.? ನಮಗೂ ರಾಜಕಾರಣ ಬರುತ್ತದೆ. ಅದರೆ ನಮಗೆ ರಾಜಕಾರಣ ಮುಖ್ಯವಲ್ಲ. ಜನರ ಸೇವೆ ಮುಖ್ಯ ಎಂದು ವಾಗ್ದಾಳಿ ನಡೆಸಿದರು.

ಪಕ್ಷವನ್ನು ಅಧಿಕಾರಕ್ಕೆ ತಂದ ಕಾರ್ಯಕರ್ತರ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಕರ್ತವ್ಯ. ಹಲವಾರು ಮಂದಿ ತಮ್ಮ ಕ್ಷೇತ್ರದ ಜನರ ಸಮಸ್ಯೆ, ಜಮೀನು ಖಾತೆ, ವೈಯಕ್ತಿಕ ಕುಂದು ಕೊರತೆಗಳು, ಪಕ್ಷದಲ್ಲಿ ಹುದ್ದೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಹೊತ್ತು ತಂದಿದ್ದಾರೆ. ನಮ್ಮ ವ್ಯಾಪ್ತಿಯಲ್ಲಿ ಬಗೆಹರಿಸುವಂತಹ ಸಮಸ್ಯೆಗಳನ್ನು ಶೀಘ್ರ ವಿಲೇವಾರಿ ಮಾಡಲಾಗುವುದು. ಆಯಾಯ ಇಲಾಖೆಗಳಿಗೆ ಕಳಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.