ರಾಜ್ಯ

ಸರೋಜಾದೇವಿ ನಿಧನಕ್ಕೆ ಎಚ್.ಡಿ.ಕುಮಾರಸ್ವಾಮಿ ಹಾಗೂ ಆರ್‌.ಅಶೋಕ್‌ ಸಂತಾಪ

ಬೆಂಗಳೂರು: ಕನ್ನಡದ ಹಿರಿಯ ನಟಿ, ಬಹುಭಾಷಾ ತಾರೆ ಬಿ.ಸರೋಜಾದೇವಿ ಅವರ ನಿಧನಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಸರೋಜಾದೇವಿ ಅವರು ನಿಧನದ ಸುದ್ದಿ ಕೇಳಿ ದುಃಖವಾಯಿತು.

ಮೇರುನಟರಾದ ಡಾ.ರಾಜ್ ಕುಮಾರ್ ಅವರು ಸೇರಿದಂತೆ ಭಾರತದ ಎಲ್ಲಾ ಭಾಷೆಗಳ ದಿಗ್ಗಜ ನಾಯಕ ನಟರೆಲ್ಲರ ಜತೆ ನಟಿಸಿದ್ದ ಸರೋಜಾದೇವಿ ಅವರು, ಅಭಿಮಾನಿಗಳ ಪಾಲಿಗೆ ಅಭಿನಯ ಸರಸ್ವತಿ ಆಗಿದ್ದರು. ಅವರ ಅನನ್ಯ ಅಭಿನಯ ನಮ್ಮೆಲ್ಲರನ್ನೂ ಮಂತ್ರ ಮುಗ್ಧರನ್ನಾಗಿ ಮಾಡುತ್ತಿತ್ತು.

ಕನ್ನಡ ಬೆಳ್ಳಿತೆರೆಯನ್ನು ಶ್ರೀಮಂತಗೊಳಿಸುವಲ್ಲಿ ಅಪಾರ ಕಾಣಿಕೆ ನೀಡಿರುವ ಅವರು; ಕಿತ್ತೂರು ಚೆನ್ನಮ್ಮ, ಬಬ್ರುವಾಹನ ಸೇರಿದಂತೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಅಗಲಿಕೆ ಚಿತ್ರರಂಗಕ್ಕೆ, ನಾಡಿಗೆ ಬಹುದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಇನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ವಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ಬಿ.ಸರೋಜಾದೇವಿ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಇದು ಕನ್ನಡ ಚಿತ್ರರಂಗಕ್ಕೆ ಮಾತ್ರವಲ್ಲದೇ ಇಡೀ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಸರೋಜಾದೇವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.

ಆಂದೋಲನ ಡೆಸ್ಕ್

Recent Posts

ನಿಗೂಢ ವಸ್ತು ಸ್ಫೋಟ: 6 ಶಾಲಾ ಮಕ್ಕಳಿಗೆ ಗಂಭೀರ ಗಾಯ

ಬೀದರ್:‌ ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…

14 mins ago

ಮೈಸೂರು| ರಾಜ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದ ಮಾಜಿ ಸಚಿವ ಸಿ.ಟಿ.ರವಿ

ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌…

37 mins ago

ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ ಪ್ರಮಾಣವಚನ ಸ್ವೀಕಾರ?

ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್‌ ಪವಾರ್‌ ಪತ್ನಿ ಸುನೇಂದ್ರ ಪವಾರ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…

55 mins ago

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ…

2 hours ago

ನಾಳೆ ಕೇಂದ್ರ ಬಜೆಟ್‌ ಮಂಡನೆ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ 9ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ…

2 hours ago

ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಇಂದು ಸಂಜೆ ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್‌ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…

3 hours ago