ಬೆಂಗಳೂರು: ಮಂಡ್ಯ ಜಿಲ್ಲೆಯ ಮಳಮಳ್ಳಿ ತಾಲ್ಲೂಕಿನ ಟಿ.ಕಾಗೇಪುರ ಖಾಸಗಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವುದರ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಅತ್ಯಂತ ದುರದೃಷ್ಟಕರ. ಇದರಿಂದ ನನಗೆ ಬಹಳ ನೋವುಂಟಾಗಿದೆ. ಮೃತ ವಿದ್ಯಾರ್ಥಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಮತ್ತೆ ಇಂತಹ ಘಟನೆಗಳು ಮರುಕಳಿಸದಿರಲಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಬಗ್ಗೆ ಸಂಬಂಧಿತ ಅಧಿಕಾರಿಗಳಿಂದ ಮಾಹಿತಿ ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕೆಂದು ಸೂಚಿದ್ದೇನೆ. ಅಲ್ಲದೇ ಬೇಸಿಗೆ ಕಾಲವಾದ್ದರಿಂದ ವಿದ್ಯಾರ್ಥಿಗಳಿಗೆ ನೀಡಲಾಗುವ ಆಹಾರ ಹಾಗೂ ಕುಡಿಯುವ ನೀರಿನ ಬಗ್ಗೆ ಇನ್ನೂ ಹೆಚ್ಚಿನ ಕಟ್ಟೆಚ್ಚರ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…