ಬೆಂಗಳೂರು: ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕಿ-ಸಂಖ್ಯೆ ಅಷ್ಟೇ ಅಲ್ಲ. ವೀರಶೈವ-ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಭಾರೀ ಅಚ್ಚರಿ ಮೂಡಿಸಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D Kumaraswamy) ಜಾತಿಗಣತಿ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಜಾತಿ ಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ, ಕುಂಕುಮ ಹಚ್ಚಿ, ಕಡ್ಡಿ ಹಚ್ಚಲಾಗಿದೆ. ಆ ವರದಿಯದ್ದು ಎನ್ನಲಾದ ಅಂಕಿ ಅಂಶಗಳು ಎಲ್ಲೆಡೆ ತೇಲಾಡುತ್ತಿವೆ. ಯಾವುದೋ ಅಜ್ಞಾತ ಕೈ ಅದನ್ನು ವ್ಯವಸ್ಥಿತವಾಗಿ ತೇಲಿ ಬಿಟ್ಟಿದೆ.
ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕಿ ಸಂಖ್ಯೆ ಅಷ್ಟೇ ಅಲ್ಲ. ವೀರಶೈವ ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಅಚ್ಚರಿ ಹುಟ್ಟಿಸಿದೆ.
ಗಣತಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲ, ಕಲ್ಲೋಲವೆಬ್ಬಿಸಲು ಹೂಡಿದ ಷಡ್ಯಂತ್ರವೇ ಅಥವಾ ಸರಣಿ ದರ ಏರಿಕೆ, ಸಾಲು ಸಾಲು ಭ್ರಷ್ಟ ಹಗರಣಗಳ ಮುಜುಗರದಿಂದ ಮುಖ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆಗೆ ಹೊರಳಿಸಲು ರೂಪಿಸಿದ ಸಂಚೇ?
ಹಿನ್ನೆಲೆ:- ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಬಗ್ಗೆ ಚರ್ಚಿಸಿ ನಿರ್ಧಾರ : ಸಿ. ಎಂ. ಸಿದ್ದರಾಮಯ್ಯ
ಇಡೀ ರಾಜ್ಯವು ಜಾತಿ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದರೆ ರಾಜ್ಯ ಕಾಂಗ್ರೆಸ್ ಸರ್ಕಾರದ ಈ ನಡೆ ಕೆಲ ನಿರ್ದಿಷ್ಟ ಸಮುದಾಯಗಳ ಮೇಲೆ ರಾಜಕೀಯ, ಸಾಮಾಜಿಕವಾಗಿ ಹಗೆತನ ಸಾಧಿಸುವ ಮುಂದುವರಿದ ಅಧ್ಯಾಯವೇ ಎಂದು ಪ್ರಶ್ನೆ ಮಾಡಿದರು.
ಸಿಎಂ ಕುರ್ಚಿ ಹತ್ತಲು ಚಾತಕ ಪಕ್ಷಿಯಂತೆ ನಿದ್ದೆಗೆಟ್ಟು ಒಂದು ಸಲ ನಂಗೂ ಪೆನ್ನೂ-ಪೇಪರ್ ಕೊಡಿ ಎಂದು ಸಮುದಾಯದ ಮುಂದೆ ಮಂಡಿಯೂರಿ ಗೋಗರೆದ ವ್ಯಕ್ತಿ ಸಿದ್ದಷಡ್ಯಂತ್ರ್ಯ ವರದಿಗೆ ಶಿರಬಾಗಿ ಸಮ್ಮಿತಿಸುವರೇ?
ಇದನ್ನು ಓದಿ:- ಜಾತಿಗಣತಿ ವರದಿ ಹಿಂಪಡೆಗೆ ಅಶೋಕ ಅಗ್ರಹ
ಹಿಂದೊಮೆ ನಾಡಪ್ರಭು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಷೀಣದನಿಯಲ್ಲಿ ಗಣತಿ ವರದಿಯನ್ನು ವಿರೋಧಿಸಿದ್ದವರು ಈಗ ನಾಲಿಗೆ ಬದಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದರು.
ಇನ್ನು ವರದಿಗೆ ನನ್ನ ಒಪ್ಪಿಗೆ ಇಲ್ಲ. ಅನ್ಯಾಯದ ವಿರುದ್ಧ ಹೋರಾಟಕ್ಕೆ ನಾನು ಶತಸಿದ್ಧ ಎಂದು ಎಚ್ಚರಿಕೆ ನೀಡಿದ್ದಾರೆ.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…