ರಾಜ್ಯ

ರಾಮನಗರ ಕ್ಷೇತ್ರ ಅಭಿವೃದ್ಧಿ ಮಾಡಿದ್ದು ನಾನು: ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಬದಲಾಯಿಸಲು ಹೊರಟರೆ ತಕರಾರು ತೆಗೆಯುತ್ತಾರೆ ಎನ್ನುತ್ತಾರೆ. ರಾಮನಗರ ಕ್ಷೇತ್ರ ಅಭಿವೃದ್ಧಿ ಮಾಡಿದ್ದೇ ನಾನು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್‌ ಅವರು ರಾಮನಗರದಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ. ಅವರು ರಾಮನಗರ ಜಿಲ್ಲೆಯ ಹೆಸರು ಬದಲಾಯಿಸಲು ಹೊರಟರೆ ತಕರಾರು ಮಾಡುತ್ತಾರೆಂದು ಹೇಳುತ್ತಾರೆ. ಆದರೆ ನಿಜವಾಗಿಯೂ ಆ ಕ್ಷೇತ್ರವನ್ನು ಅಭಿವೃದ್ಧಿ ಪಡಸಿದ್ದು ನಾನು ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ರಾಮನಗರದಲ್ಲಿ ನಾನು ಕಷ್ಟಪಟ್ಟು 45 ಎಕರೆ ಜಮೀನು ಖರೀದಿ ಮಾಡಿದ್ದೇನೆ. ಆದರೆ ಶನಿವಾರರ ನೋಟಿಸ್‌ ನೀಡದೆ ದಾಳಿ ಮಾಡಲು ಬಂದಿದ್ದರು. ನನ್ನ ಜಮೀನು ಸರ್ವೇ ಮಾಡಲು ಬಯಲ ಬಯಸಿದರೆ ನೋಟಿಸ್‌ ನೀಡಿದ ಬಳಿಕ ಬರಲಿ. ಇಲ್ಲವಾದರೆ ತನಿಖೆ ನಡೆಸಲು ಎಸ್‌ಐಟಿ ತಂಡ ರಚಿಸಲಿ. ಅದನ್ನು ಬಿಟ್ಟು ಹೇಳದೆ ಕೇಳದೆ ದಾಳಿ ಮಾಡಿದರೆ ಹೇಗೆ. ನಾನೇದರೂ ಅಕ್ರಮವಾಗಿ ಭೂಮಿ ಖರರೀದಿಸದ್ದರೆ ನನ್ನಿಂದ ಭೂಮಿಯನ್ನು ಹಿಂಪಡೆಯಲಿ ಎಂದು ತಿರುಗೇಟು ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್‌ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಈ…

8 mins ago

ಮೈಸೂರು| ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…

31 mins ago

ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಹೈಕೋರ್ಟ ಗ್ರೀನ್‌ ಸಿಗ್ನಲ್‌

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್‌ ಟ್ಯಾಕ್ಸಿಗಳಿಗೆ ಲೈಸೆನ್ಸ್‌ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಭು…

57 mins ago

ಹನೂರು| ಅಪರಿಚಿತ ವಾಹನ ಡಿಕ್ಕಿ: ಬೈಕ್‌ ಸವಾರ ಸಾವು

ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್‌ ಬರುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿಯಾದ…

1 hour ago

ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರ ಬಂಧನ

ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್‌ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ…

2 hours ago

ಹನೂರು| ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗಮಧ್ಯೆ ಎರಡು ಚಿರತೆಗಳು ಪ್ರತ್ಯಕ್ಷ: ಆತಂಕದಲ್ಲಿ ವಾಹನ ಸವಾರರು

ಮಹಾದೇಶ್‌ ಎಂ ಗೌಡ  ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ…

2 hours ago