ರಾಜ್ಯ

ಅಂತೂ ನನ್ನ ಅನುಮಾನ ನಿಜವಾಯಿತು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌

ಬೆಂಗಳೂರು: ಜಾತಿ ಗಣತಿ ವರದಿ ಬಗ್ಗೆ ಸಿಎಂ ಸಿದ್ದರಾಮಯ್ಯ (C M Siddaramaiah) ಈಗ ಉಲ್ಟಾ ಹೊಡೆದಿದ್ದು, ಅಂತೂ ನನ್ನ ಅನುಮಾನ ಈಗ ನಿಜವಾಯಿತು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H D Kumaraswamy) ಹೇಳಿದ್ದಾರೆ. ಸಿದ್ದರಾಮಯ್ಯನವರು ಈಗ ಉಲ್ಟಾ ಹೊಡೆದಿದ್ದಾರೆ! ‘ಅದು ಜಾತಿ ಸಮೀಕ್ಷೆ ಅಲ್ಲ.. ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ’ ಎಂದು ಹೊಸ ಪೀಪಿ ಊದುತ್ತಿದ್ದಾರೆ.

ಹಾಗಾದರೆ ಹಾದಿ ಬೀದಿಯಲ್ಲಿ ತೇಲಾಡುತ್ತಿರುವ, ಬಿದ್ದೂ ಬಿದ್ದು ಹೊರಳಾಡುತ್ತಿರುವ ಅಂಕಿ ಸಂಖ್ಯೆಗಳು ಏನು? ಸೋರಿಕೆಯಾಗಿರುವ ದತ್ತಾಂಶ ಮತ್ತು ಸಿಎಂ ಅವರು ಹೇಳಿದ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ದತ್ತಾಂಶವು ಎರಡೂ ಒಂದೇನಾ? ಅಥವಾ ಅಲ್ಲವಾ? ಎಂದು ಪ್ರಶ್ನೆ ಮಾಡಿದ್ದಾರೆ.

ವರದಿ ಬಹಿರಂಗಕ್ಕೆ ಮೊದಲೇ ವ್ಯವಸ್ಥಿತವಾಗಿ ಸೋರಿಕೆ ಮಾಡಿದ್ದು ಯಾರು? ಅದರ ಹಿಂದಿರುವ ಕಳ್ಳ ಕೈ ಯಾವುದು? ಬೀದಿಪಾಲಾದ ದತ್ತಾಂಶ ಇಟ್ಟುಕೊಂಡು ಏನು ಮಾಡುತ್ತೀರಿ?

ಸಿಎಂ ಸಾಹೇಬರೇ.. ಸೋರಿಕೆ ಬಗ್ಗೆ ತಪ್ಪದೇ ತನಿಖೆ ಮಾಡಿಸಿ. ಅದು ಆಯೋಗದಿಂದ ಸೋರಿಕೆ ಆಯಿತಾ? ಅಥವಾ ಸಂಪುಟದಲ್ಲಿ ಸಚಿವರ ಕೈ ಸೇರಿದ ಮೇಲೆ ಸೋರಿಕೆ ಆಯಿತಾ? ಅಥವಾ ನಿಮ್ಮ ಗ್ಯಾಂಗ್ ಕೈ ಚಳಕವಾ? ತನಿಖೆ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೀರಾ? ನೀವೇ ಹೇಳಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು ಸೋರಿಕೆಗೆ ನಿಮ್ಮ ಸರಕಾರವೇ ಹೊಣೆ, ಅದರಲ್ಲಿ ಯಾವುದೇ ಸಂಶಯವೇ ಇಲ್ಲ. ಯಾವುದೇ ಕಾರಣಕ್ಕೂ ಸೋರಿಕೆಯಾದ ಈ ವರದಿಯನ್ನು ಸಂಪುಟದಲ್ಲಿ ಮಂಡಿಸಲೇಬಾರದು. ಮಂಡಿಸಿ ಸಂಪುಟದ ಪಾವಿತ್ರ್ಯತೆ ಹಾಳು ಮಾಡಬೇಡಿ. ನೆಮ್ಮದಿಯಾಗಿದ್ದ ರಾಜ್ಯಕ್ಕೆ ಬೆಂಕಿ ಹಾಕಿದ್ದೀರ. ಜಾತಿಗಳ ಮಧ್ಯೆ ವಿಷಬೀಜ ಬಿತ್ತಿದ್ದೀರಿ. ನಿಮ್ಮ ದುರುದ್ದೇಶ, ದುಷ್ಟತನದ ಪರಾಕಾಷ್ಠೆ ಇದು. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಕೊಳ್ಳಿ ಇಟ್ಟ ಪಾಪ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಆಂದೋಲನ ಡೆಸ್ಕ್

Recent Posts

ವೋಟ್‌ ಚೋರಿ | ಸತ್ಯದ ಬೆನ್ನಿಗೆ ನಿಂತು ಮೋದಿ, ಶಾ, ಆರ್‌ಎಸ್‌ಎಸ್‌ ಅನ್ನು ಖಾಲಿ ಮಾಡಿಸುತ್ತೇವೆ : ಕಾಂಗ್ರೆಸ್‌ ಶಪಥ

ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…

6 hours ago

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…

7 hours ago

ಆಯ್ತಪ್ಪ ನಾಳೆ ʻಗ್ಯಾರಂಟಿʼ ನಿಲ್ಲಿಸಿತ್ತೀವಿ ಬಿಡಿ : ಪರಮೇಶ್ವರ್‌ ಹೀಗೆ ಹೇಳಿದ್ಯಾಕೆ?

ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…

7 hours ago

ಇಂದಿರಾಗಾಂಧಿ ತ್ಯಾಗದ ಮುಂದೆ ನಮ್ಮದೇನು ಇಲ್ಲ : ಖರ್ಗೆ ಭಾವುಕ ನುಡಿ

ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್‌ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್‌ ಮಾಡಿ ಬಹಳ…

7 hours ago

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ; ಸಾರ್ವಜನಿಕರಲ್ಲಿ ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ!

ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…

8 hours ago

ಯತ್ನಾಳ್‌, ಸಂತೋಷ್‌ ಲಾಡ್‌ ಮಧ್ಯ ಸೈದ್ಧಾಂತಿಕ ವಾರ್‌ : ಶಿವಾಜಿ ಮುಸ್ಮಿಂ ವಿರೋಧಿಗಳಲ್ಲ ; ಲಾಡ್‌

ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ‌ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…

8 hours ago