Mysore
17
scattered clouds

Social Media

ಭಾನುವಾರ, 15 ಫೆಬ್ರವರಿ 2026
Light
Dark

ರಾಜ್ಯ ಸರ್ಕಾರ ನನ್ನ ವಿರುದ್ಧ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಂಡು ರಾಜಕಾರಣ ನಡೆಸುತ್ತಿದೆ: ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು: ಕೇತಗಾಹಳ್ಳಿ ಸರ್ಕಾರಿ ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನನ್ನ ವಿರುದ್ಧ ಸರ್ಕಾರಿ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ರಾಜಕಾರಣ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.5) ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್‌ಐಟಿ ತಂಡ ರಚಿಸಿ ತನಿಖೆ ಮಾಡಿಸಿದ್ದು, ಇತಿಹಾಸದಲ್ಲೇ ಮೊದಲ ಬಾರರಿಗೆ ನಡೆದಿದೆ. ನಾನು ಕೆಳಹಂತದ ಅಧಿಕಾರಿಗಳನ್ನು ಪ್ರಶ್ನಿಸುವುದಿಲ್ಲ. ಆದರೆ ಈ ವಿಚಾರದಲ್ಲಿ ನಾನು ಇಂದಿನಿಂದ ಸರ್ಕಾರದ ವಿರುದ್ಧ ನನ್ನ ಯುದ್ಧ ಪ್ರಾರಂಭಿಸುತ್ತೇನೆಂದು ಈ ನಾಡಿನ ಜನೆತೆಗೆ ಹೇಳುತ್ತಿದ್ದೇನೆ ಎಂದು ಹೇಳಿದ್ದಾರೆ.

ನನ್ನ ವಿರುದ್ಧ 70 ಎಕರೆ ಒತ್ತುವರಿ ಅತಿಕ್ರಮಣ ಮತ್ತು ಅಕ್ರಮದ ದಾಖಲೆ ಇದ್ದರೆ ಬಿಡುಗಡೆ ಮಾಡಲಿ, ನನ್ನ ಬಳಿ ಕೇವಲ 40 ಎಕರೆ ಭೂಮಿ ಮಾತ್ರ ಇರುವುದು. ಆದರೆ ಸರ್ಕಾರ ಇದನ್ನು ಪರೀಕ್ಷಿಸಲು 4-5 ಜೆಸಿಬಿ, 25 ರಿಂದ 30 ಅಧಿಕಾರಿಗಳು ಹಾಗೂ ಪೊಲೀಸರನ್ನು ಬೇರೆ ಕರೆ ತಂದು 4 ಎಕರೆ ಭೂಮಿಗಾಗಿ ತನಿಖೆ ನಡೆಸಿದ್ದಾರೆ. ಒಟ್ಟಾರೆ ಈ ಸರ್ಕಾರದವರೂ ನಾನು ಅಪರಾಧಿ ಎಂದು ಅಪಪ್ರಚಾರ ಮಾಡಲು ಹೊರಟಿದ್ದಾರೆ. ಆದರೆ ಇದೆಕ್ಕೆಲ್ಲಾ ನಾನು ಎಂದಿಗೂ ಹೆದರುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Tags:
error: Content is protected !!