ಬೆಂಗಳೂರು: ಕೇತಗಾಹಳ್ಳಿ ಸರ್ಕಾರಿ ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನನ್ನ ವಿರುದ್ಧ ಸರ್ಕಾರಿ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ರಾಜಕಾರಣ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.5) ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್‌ಐಟಿ ತಂಡ ರಚಿಸಿ ತನಿಖೆ ಮಾಡಿಸಿದ್ದು, ಇತಿಹಾಸದಲ್ಲೇ ಮೊದಲ ಬಾರರಿಗೆ ನಡೆದಿದೆ. ನಾನು ಕೆಳಹಂತದ ಅಧಿಕಾರಿಗಳನ್ನು ಪ್ರಶ್ನಿಸುವುದಿಲ್ಲ. ಆದರೆ ಈ ವಿಚಾರದಲ್ಲಿ ನಾನು ಇಂದಿನಿಂದ ಸರ್ಕಾರದ ವಿರುದ್ಧ ನನ್ನ ಯುದ್ಧ ಪ್ರಾರಂಭಿಸುತ್ತೇನೆಂದು ಈ ನಾಡಿನ ಜನೆತೆಗೆ ಹೇಳುತ್ತಿದ್ದೇನೆ ಎಂದು ಹೇಳಿದ್ದಾರೆ.
ನನ್ನ ವಿರುದ್ಧ 70 ಎಕರೆ ಒತ್ತುವರಿ ಅತಿಕ್ರಮಣ ಮತ್ತು ಅಕ್ರಮದ ದಾಖಲೆ ಇದ್ದರೆ ಬಿಡುಗಡೆ ಮಾಡಲಿ, ನನ್ನ ಬಳಿ ಕೇವಲ 40 ಎಕರೆ ಭೂಮಿ ಮಾತ್ರ ಇರುವುದು. ಆದರೆ ಸರ್ಕಾರ ಇದನ್ನು ಪರೀಕ್ಷಿಸಲು 4-5 ಜೆಸಿಬಿ, 25 ರಿಂದ 30 ಅಧಿಕಾರಿಗಳು ಹಾಗೂ ಪೊಲೀಸರನ್ನು ಬೇರೆ ಕರೆ ತಂದು 4 ಎಕರೆ ಭೂಮಿಗಾಗಿ ತನಿಖೆ ನಡೆಸಿದ್ದಾರೆ. ಒಟ್ಟಾರೆ ಈ ಸರ್ಕಾರದವರೂ ನಾನು ಅಪರಾಧಿ ಎಂದು ಅಪಪ್ರಚಾರ ಮಾಡಲು ಹೊರಟಿದ್ದಾರೆ. ಆದರೆ ಇದೆಕ್ಕೆಲ್ಲಾ ನಾನು ಎಂದಿಗೂ ಹೆದರುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…