ರಾಜ್ಯ

ಕೇಂದ್ರ ಬಜೆಟ್‌-2025| ಕರ್ನಾಟಕಕ್ಕೆ ತುಂಬಾ ನಿರಾಸೆ: ಎಚ್.ಕೆ.ಪಾಟೀಲ್‌

ಗದಗ: ಕೇಂದ್ರ ಸರ್ಕಾರ ಈ ಬಾರಿ ಮಂಡಿಸಿರುವ ಬಜೆಟ್‌ ಕರ್ನಾಟಕಕ್ಕೆ ತುಂಬಾ ನಿರಾಸೆಯನ್ನು ತಂದಿದೆ. ಆದರೆ ಈ ಬಗ್ಗೆ ಒಬ್ಬರಾದರೂ ಎದ್ದು ನಿಂತು ಪ್ರಶ್ನಿಸಿಲ್ಲ ಎಂದು ಸಚಿವ ಎಚ್.ಕೆ.ಪಾಟೀಲ್‌ ತಿಳಿಸಿದ್ದಾರೆ.

ಗದಗದಲ್ಲಿ ಇಂದು (ಫೆಬ್ರವರಿ.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಬಜೆಟ್‌ ಬಿಹಾರ ಚುನಾವಣೆಯ ಘೋಷಣಾ ಪತ್ರವಾಗಿದೆ. ಈ ಬಜೆಟ್‌ ದಕ್ಷಿಣ ಭಾರತದವರಿಗೆ ಅನ್ಯಾಯ ಮಾಡುವಂತಹ ಬಜೆಟ್‌ ಆಗಿದೆ. ಫೆಡರಲ್‌ ವ್ಯವಸ್ಥೆಯೊಳಗೆ ನಮ್ಮ ವಿಶ್ವಾಸ ಕಮ್ಮರುವ ರೀತಿಯಲ್ಲಿ ಕೇಂದ್ರ ಸರ್ಕಾರ ಬಜೆಟ್‌ ಮಂಡನೆ ಮಾಡಿದೆ ಎಂದರು.

ನಾವು ರಾಜ್ಯದಿಂದ ಕೇಂದ್ರಕ್ಕೆ ಎಷ್ಟು ತೆರಿಗೆಯನ್ನು ವಿಧಿಸುತ್ತೇವೆ ಎಂಬುದು ತಿಳಿದಿದೆ. ಈ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ನೀಡಿರುವ ಪಾಲು ಎಷ್ಟು? ಈ ವಿಚಾರಕ್ಕೆ ಸಂಬಂಧಿಸಿದಂತೆಯೇ ಈ ಮೊದಲು ನಾವು ವಿಧಾನಸಭೆ ಮತ್ತು ವಿಧಾನ ಪರಿಷತ್‌ಗಳಲ್ಲಿ ಚರ್ಚಿಸಿದ್ದರು ಸಹ ಕೇಂದ್ರ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಅಲ್ಲದೇ ಈ ಬಜೆಟ್‌ ನಮ್ಮ ರಾಜ್ಯಕ್ಕೆ ನಿರಾಸೆಯನ್ನು ತಂದಿರುವ ಕರಾಳ ಬಜೆಟ್‌ ಆಗಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಗಣರಾಜ್ಯ ರಕ್ಷಣೆಗೆ ಸಾಮೂಹಿಕ ಎಚ್ಚರಿಕೆಯ ಕರೆ ನೀಡಿದ ಮಮತಾ

ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…

41 seconds ago

ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…

18 mins ago

ಸೋಮವಾರಪೇಟೆ | ಕಾಜೂರಿನಲ್ಲಿ ಅಗ್ನಿ ಅವಘಡ ; ತಪ್ಪಿದ ಭಾರಿ ಅನಾಹುತ

​ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…

26 mins ago

ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಮುರ್ಮು

ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…

50 mins ago

ಗಣರಾಜ್ಯೋತ್ಸವ | ಸಂಪೂರ್ಣ ಭಾಷಣ ಓದಿದ ರಾಜ್ಯಪಾಲರು

ಬೆಂಗಳೂರು : ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ನಗರದ ಮಾಣೆಕ್‌ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…

1 hour ago

ಮೈಸೂರು | ಧ್ವಜಾರೋಹಣ ನೆರವೇರಿಸಿದ ಸಚಿವ ಮಹದೇವಪ್ಪ : ಸಂವಿಧಾನ ರಕ್ಷಿಸಲು ಕರೆ

ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…

1 hour ago