ಗದಗ: ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ ದೇಶದ ಒಬ್ಬ ಪ್ರಮುಖ ವ್ಯಕ್ತಿ ಈ ಬಾರಿಯ ಮೈಸೂರು ದಸರಾಗೆ ಬರಲಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್ ಹೇಳಿದರು.
ಈ ಬಾರಿಯ ದಸರಾ ಉದ್ಘಾಟನೆ ಎರಡು-ಮೂರು ಹೆಸರುಗಳನ್ನು ಪ್ರಸ್ತಾಪಿಸಲಾಗಿದೆ. ಆದರೆ ಅಂತಿಮವಾಗಿ ಉದ್ಘಾಟಕರ ಹೆಸರನ್ನು ಸಿಎಂ ಸಿದ್ದರಾಮಯ್ಯ ಅವರೇ ಅಂತಿಮಗೊಳಿಸುತ್ತಾರೆ ಈ ಬಾರಿ ಗತವೈಭವ ಅನುಭವಿಸುವಂತೆ ದಸರಾ ಆಚರಣೆ ಮಾಡಲಾಗುವುದು ಎಂದು ಅವರು ಹೇಳಿದರು.