ರಾಜ್ಯ

ಪ್ರಹ್ಲಾದ್‌ ಜೋಶಿರವರ ಫೇಕ್‌ ಎನ್‌ಕೌಂಟರ್‌ ಹೇಳಿಕೆ: ಕೇಂದ್ರ ಸಚಿವ ಸ್ಥಾನಕ್ಕೆ ಶೋಭೆ ತರಲ್ಲ-ಎಚ್‌.ಕೆ.ಪಾಟೀಲ

ಬೆಳಗಾವಿ: ಎಂಎಲ್‌ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್‌ ಎನ್‌ಕೌಂಟರ್‌ ಹೇಳಿಕೆ ನೀಡಿರುವುದು ಶೋಭೆ ತರುವುದಿಲ್ಲ ಎಂದು ಸಚಿವ ಎಚ್‌.ಕೆ.ಪಾಟೀಲ ತಿಳಿಸಿದ್ದಾರೆ.

ನಗರದಲ್ಲಿ ಇಂದು(ಡಿಸೆಂಬರ್‌.22) ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರ ಹೇಳಿಕೆಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ವಿಧಾನ ಪರಿಷತ್‌ನಲ್ಲಿ ನಡೆದ ಈ ಘಟನೆಯಿಂದ ಎಲ್ಲರೂ ತಲೆ ತಗ್ಗಿಸುವಂತಹ ವಿಚಾರವಾಗಿದೆ. ಹೀಗಿರುವಾಗ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರನ್ನು ಬಂಧಿಸಿ ಪೊಲೀಸರು ಬೇರೆ ಬೇರೆ ಸ್ಥಳಕ್ಕೆ ಯಾಕೆ ಕರೆದೊಯ್ದಿದ್ದಾರೆ ಎಂದು ವಿವರಣೆ ನೀಡಿದ್ದಾರೆ. ಹೀಗಾಗಿ ಈ ಬಗ್ಗೆ ನಾನು ಇನ್ನು ಹೆಚ್ಚು ಪ್ರತಿಕ್ರಿಯೆ ನೀಡಲಾರೆ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಸಿ.ಟಿ.ರವಿ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬೆಂಬಲಿಗರು ಹಲ್ಲೆಗೆ ಪೊಲೀಸರು ಪ್ರಕರಣ ದಾಖಲಿಸದ ಪ್ರಶ್ನೆ ಕುರಿತು ಮಾತನಾಡಿದ ಅವರು, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ನೀವೆಲ್ಲರೂ ಗೃಹ ಸಚಿವರನ್ನೇ ಕೇಳಬೇಕು. ಅವರೇ ಇದಕ್ಕೆಲ್ಲಾ ಪ್ರತಿಕ್ರಿಯೆ ನೀಡುತ್ತಾರೆ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಂಡ್ಯದಲ್ಲಿ ಬರ್ಬರ ಕೊಲೆ ಪ್ರಕರಣ: ಸಾಲ ತೀರಿಸಲು ದರೋಡೆಗೆ ಇಳಿದಿದ್ದ ಪಾತಕಿ

ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್‌ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್‌ ವಿಚಾರ ಬಾಯ್ಬಿಟ್ಟಿದ್ದಾನೆ.…

15 mins ago

ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…

53 mins ago

ಇನ್ಮುಂದೆ ಕಬ್ಬನ್‌ ಪಾರ್ಕ್‌ನಲ್ಲಿ ಗುಂಪು ಚಟುವಟಿಕೆಗೆ ಅನುಮತಿ ಪಡೆಯುವುದು ಕಡ್ಡಾಯ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್‌ ಆದ ಕಬ್ಬನ್‌ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…

1 hour ago

ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ ವೈಭವ್‌ ಸೂರ್ಯವಂಶಿ

13 ವರ್ಷದ ವೈಭವ್‌ ಸೂರ್ಯವಂಶಿ ಐಪಿಎಲ್‌ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…

1 hour ago

ಕುವೈತ್‌ ಪ್ರವಾಸದಲ್ಲಿ ಪ್ರಧಾನಿ ಮೋದಿ: ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ

ಕುವೈತ್‌: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್‌ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್‌ ಮಿಶಾಲ್‌…

1 hour ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಸಮನ್ಸ್‌ ನೀಡಿದ ರಾಯ್‌ ಬರೇಲಿ ನ್ಯಾಯಾಲಯ

ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…

2 hours ago