Mysore
18
few clouds

Social Media

ಸೋಮವಾರ, 26 ಜನವರಿ 2026
Light
Dark

ಕಾರವಾರದಲ್ಲಿ ಕೆಲವು ಮಹಿಳೆಯರು ನಮಗೆ ಗ್ಯಾರಂಟಿ ಯೋಜನೆಗಳು ಬೇಡವೆಂದು ಹೇಳಿದ್ದಾರೆ: ಎಚ್‌.ಎಂ.ರೇವಣ್ಣ

ನವದೆಹಲಿ: ಕಾರವಾರದಲ್ಲಿ ಕೆಲವು ಮಹಿಳೆಯರು ನಮಗೆ ಗ್ಯಾರಂಟಿ ಯೋಜನೆಗಳು ಬೇಡ, ಅದು ಬಡವಿಗೆ ತಲುಪಬೇಕೆಂದು ತಿಳಿಸಿದ್ದಾರೆ. ಹಾಗಾಗಿ ಸ್ವಇಚ್ಛೆಯಿಂದ ಗ್ಯಾರಂಟಿ ಬಿಟ್ಟು ಕೊಡುವ ಜನತೆಗಾಗಿ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ.ರೇವಣ್ಣ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಮಾರ್ಚ್‌.4) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಅನುಷ್ಠಾನದ ಬಗ್ಗೆ ಕಾಂಗ್ರೆಸ್ ನಾಯಕರಾದ ಕೆ.ಸಿ.ವೇಣುಗೋಪಾಲ್, ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರಿಗೆ ಮಾಹಿತಿ ನೀಡಿದ್ದೇನೆ. ಅಲ್ಲದೇ ನಾವು ಚುನಾವಣಾ ಪೂರ್ವದಲ್ಲಿ ಸಾರ್ವಜನಿಕರಿಗೆ ಗ್ಯಾರಂಟಿ ಜಾರಿ ಮಾಡುವ ಭವಸೆ ನೀಡಿದ್ದೆವು. ಸರ್ಕಾರ ರಚನೆಯಾದ ಬಳಿಕ ಮೊದಲ ಸಂಪುಟದಲ್ಲೇ ನಾವು ಗ್ಯಾರಂಟಿ ಜಾರಿ ಮಾಡಿದ್ದೇವೆ. ಎಲ್ಲ ಯೋಜನೆಗಳು ಸರಿಯಾಗಿ ಅನುಷ್ಠಾನಕ್ಕೆ ಬಂದಿವೆ, ಅಲ್ಲದೇ ಗೃಹಲಕ್ಷ್ಮಿ ಯೋಜನೆ ಅಡಿ ಮೂರು ತಿಂಗಳು ಹಣ ಪಾವತಿ ಆಗಿರಲಿಲ್ಲ. ಈಗ ಅದಕ್ಕೂ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುವವರು, ಉಳ್ಳವರು ಹಾಗೂ ಬಿಜೆಪಿ ನಾಯಕರು, ಬಡವರಿಗೆ ಬಾಯಿ ಇಲ್ಲ ಅದಕ್ಕೆ ಮಾತನಾಡಲ್ಲ ಎಂದು ಹೇಳುತ್ತಾರೆ. ಆದರೆ ನಾವು ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಗ್ಯಾರಂಟಿ ಯೋಜನೆಗಳು ಜನತೆಯ ಆರ್ಥಿಕ ಸ್ಥಿತಿ ಹೆಚ್ಚಿಸಿದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇದರ ಬಗ್ಗೆ ನಮ್ಮ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ. ಅಲ್ಲದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇದರ ಕುರಿತು ಯಾರು ಮಾತನಾಡಬೇಡಿ ಎಂದಿದ್ದಾರೆ. ಹೀಗಾಗಿ ಮಾತನಾಡಲ್ಲ, ಸದ್ಯ ರಾಜ್ಯ ಸರ್ಕಾರದಲ್ಲಿ ಎರಡು ಕುರ್ಚಿಗಳು ಭರ್ತಿ ಇವೆ ಎಂದು ತಿಳಿಸಿದರು.

Tags:
error: Content is protected !!