Mysore
26
broken clouds

Social Media

ಸೋಮವಾರ, 26 ಜನವರಿ 2026
Light
Dark

ಬೆಳಗಾವಿಯಲ್ಲಿ ಕೃಷ್ಣಮೃಗಗಳ ಸಾವಿಗೆ H S ಬ್ಯಾಕ್ಟೀರಿಯಾ ಕಾರಣ: ಮರಣೋತ್ತರ ಪರೀಕ್ಷೆಯಲ್ಲಿ ದೃಢ

ಬೆಳಗಾವಿ: ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ಕಿರುಮೃಗಾಲಯದಲ್ಲಿ ಕೃಷ್ಣಮೃಗಗಳ ಸರಣಿ ಸಾವಿಗೆ ಕಾರಣ ಬಹಿರಂಗವಾಗಿದೆ.

ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಇವುಗಳ ಸಾವಿಗೆ ಎಚ್‌ಎಸ್‌ ಬ್ಯಾಕ್ಟೀರಿಯಾ ಕಾರಣ ಎಂದು ಮರಣೋತ್ತರ ಪರೀಕ್ಷೆಯಲ್ಲಿ ದೃಢವಾಗಿದೆ.

ಬೆಂಗಳೂರಿನ ಬನ್ನೇರುಘಟ್ಟ ಪಶು ವಿಜ್ಞಾನ ವಿದ್ಯಾಲಯದ ತಜ್ಞರ ತಂಡ ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯಕ್ಕೆ ಭೇಟಿ ನೀಡಿದ್ದು, ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಿದೆ.

ಕೃಷ್ಣಮೃಗಗಳು ಎಚ್‌ಎಸ್‌ ಬ್ಯಾಕ್ಟೀರಿಯಾದಿಂದ ಸಾವನ್ನಪ್ಪಿವೆ ಎಂದು ತಿಳಿಸಲಾಗಿದ್ದು, ಜೊತೆಗೆ ತಾಪಮಾನ ಕುಸಿತ, ಒತ್ತಡದಿಂದಲೂ ಕೃಷ್ಣಮೃಗಗಳು ಮೃತಪಟ್ಟಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ನಡುವೆ ಮೃಗಾಲಯದಲ್ಲಿರುವ 7 ಕೃಷ್ಣಮೃಗಗಳಿಗೆ ಮುಂಜಾಗ್ರತಾ ಕ್ರಮವಾಗಿ ತಪಾಸಣೆ, ಚಿಕಿತ್ಸೆ ನೀಡಲಾಗುತ್ತಿದೆ. ಇತರ ಪ್ರಾಣಿಗಳಿಗೂ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

Tags:
error: Content is protected !!