ಬೆಳಗಾವಿ: ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ಕಿರುಮೃಗಾಲಯದಲ್ಲಿ ಕೃಷ್ಣಮೃಗಗಳ ಸರಣಿ ಸಾವಿಗೆ ಕಾರಣ ಬಹಿರಂಗವಾಗಿದೆ.
ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಇವುಗಳ ಸಾವಿಗೆ ಎಚ್‌ಎಸ್ ಬ್ಯಾಕ್ಟೀರಿಯಾ ಕಾರಣ ಎಂದು ಮರಣೋತ್ತರ ಪರೀಕ್ಷೆಯಲ್ಲಿ ದೃಢವಾಗಿದೆ.
ಬೆಂಗಳೂರಿನ ಬನ್ನೇರುಘಟ್ಟ ಪಶು ವಿಜ್ಞಾನ ವಿದ್ಯಾಲಯದ ತಜ್ಞರ ತಂಡ ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯಕ್ಕೆ ಭೇಟಿ ನೀಡಿದ್ದು, ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಿದೆ.
ಕೃಷ್ಣಮೃಗಗಳು ಎಚ್‌ಎಸ್ ಬ್ಯಾಕ್ಟೀರಿಯಾದಿಂದ ಸಾವನ್ನಪ್ಪಿವೆ ಎಂದು ತಿಳಿಸಲಾಗಿದ್ದು, ಜೊತೆಗೆ ತಾಪಮಾನ ಕುಸಿತ, ಒತ್ತಡದಿಂದಲೂ ಕೃಷ್ಣಮೃಗಗಳು ಮೃತಪಟ್ಟಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಈ ನಡುವೆ ಮೃಗಾಲಯದಲ್ಲಿರುವ 7 ಕೃಷ್ಣಮೃಗಗಳಿಗೆ ಮುಂಜಾಗ್ರತಾ ಕ್ರಮವಾಗಿ ತಪಾಸಣೆ, ಚಿಕಿತ್ಸೆ ನೀಡಲಾಗುತ್ತಿದೆ. ಇತರ ಪ್ರಾಣಿಗಳಿಗೂ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…