ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ.
ಸದ್ಯಕ್ಕೆ ಹೈಸ್ಕೂಲ್ ಮಾತ್ರ ಬಂದ್ ಮಾಡಲಾಗಿದೆ. ಮಕ್ಕಳಿಗೆ ಆನ್‌ಲೈನ್ ಮೂಲಕ ಕ್ಲಾಸ್ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಪ್ರೈಮರಿ ಶಾಲೆ ಸದ್ಯ ಓಪನ್ ಆಗಿದೆ. ಹಂತ ಹಂತವಾಗಿ ಶಾಲೆ ರಿ-ಓಪನ್ ಆಗಲಿದೆ. ಒಟ್ಟು 500 ಮಕ್ಕಳಿಗೆ ಶೀತ ಜ್ವರ ಬಂದಿತ್ತು. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಸ್ಯಾನಿಟೈಷನ್ ಮಾಡಿದ್ದೇವೆ. ಆತಂಕ ಬೇಡ. ಮಕ್ಕಳಿಗೆ H1N1 ಕಾಣಿಸಿಕೊಂಡಿಲ್ಲ. ಸುತ್ತಮುತ್ತ ಬೀದಿಬದಿ ಆಹಾರ ತಯಾರಿ ಮಾಡುತ್ತಾರೆ. ಸ್ವಚ್ಛತೆ ಕಾಪಾಡಿಕೊಂಡಿಲ್ಲ. ಹೀಗಾಗಿ ನಾವು ದೂರು ಕೊಟ್ಟಿದ್ದೇವೆ ಎಂದು ಶಾಲಾ ಸಿಬ್ಬಂದಿ ತಿಳಿಸಿದ್ದಾರೆ.
ಆರೋಗ್ಯ ಇಲಾಖೆ ಆಯುಕ್ತ ಗುರುದತ್ ಹೆಗ್ಡೆ ಮಾತನಾಡಿ, ಮಕ್ಕಳಿಗೆ ಹೆಚ್1ಎನ್1 ಅನ್ನೋದು ಸುಳ್ಳು. ಇದು ಸುಳ್ಳು ಮಾಹಿತಿ. ಯಾರೂ ಇದನ್ನ ಸ್ಪ್ರೆಡ್ ಮಾಡಬೇಡಿ. ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 ಕಾಣಿಸಿಕೊಂಡಿದೆ. ಮಕ್ಕಳಿಗೆ ಕಾಣಿಸಿಕೊಂಡಿಲ್ಲ. ಪ್ಯಾನಿಕ್ ಆಗಿ ಮಕ್ಕಳು ಶಾಲೆಗೆ ಹೋಗಿಲ್ಲ. ಅಷ್ಟೇ ಯಾರು ಆತಂಕ ಪಡುವಂತಿಲ್ಲ. ಸಾರ್ವಜನಿಕವಾಗಿ ಪ್ಯಾನಿಕ್ ಆಗುತ್ತೆ ಯಾರು ಈ ಥರ ಸುದ್ದಿ ಮಾಡಬೇಡಿ. ಸಾರ್ವಜನಿಕರ ಹಿತದೃಷ್ಟಿಯಿಂದ ಪ್ಯಾನಿಕ್ ಆಗೋ ರೀತಿ ಮಾಡಬಾರದು. ಈ ಥರ ವಿಚಾರ ನಮ್ಮ ಗಮನಕ್ಕೆ ತಂದು ಸುದ್ದಿ ಮಾಡಿ. ಇದು ಸುಳ್ಳು ದಯಮಾಡಿ ಯಾರೂ ಆತಂಕ ಪಡಬೇಡಿ ಎಂದು ತಿಳಿಸಿದ್ದಾರೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…