ಬೆಂಗಳೂರು: ಎಚ್‌ಎಎಲ್ ವಿಮಾನ ನಿಲ್ದಾಣವನ್ನು ಆದಷ್ಟು ಬೇಗ ತೆರೆಯಬೇಕು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಬೆಂಗಳೂರು ದಕ್ಷಿಣ ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ ತೆರೆಯಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದ್ದಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಹೊಸ ಎರಡನೇ ವಿಮಾನ ನಿಲ್ದಾಣಕ್ಕಾಗಿ ನಾವು ಕಾಯುತ್ತಿರುವಾಗ ಎಚ್‌ಎಎಲ್‌ನಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಸಾರ್ವಜನಿಕ ಮೂಲಸೌಕರ್ಯವನ್ನು ವ್ಯರ್ಥ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಇದರಿಂದ ಸಾವಿರಾರು ಪ್ರಯಾಣಿಕರು ಪ್ರಯೋಜನ ಪಡೆಯುತ್ತಾರೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗುವ ಸುದೀರ್ಘ ಪ್ರಯಾಣ ಇದರಿಂದ ಉಳಿತಾಯವಾಗುತ್ತದೆ ಎಂದು ಹೇಳಿದ್ದಾರೆ.