Mysore
26
few clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಲು ಸಿಎಂ ಸಿದ್ದರಾಮಯ್ಯ ನಿರ್ಧಾರ

ಬೆಂಗಳೂರು: ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಬೇಕೆಂಬ ಬೇಡಿಕೆಯಿದ್ದು, ಈ ಬಗ್ಗೆ ವರದಿ ತರಿಸಿಕೊಂಡ ನಂತರ ಸೂಕ್ತ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯ ಹಳ್ಳಿಕಾರರ ಸಂಘದ ವತಿಯಿಂದ ಆಯೋಜಿಸಿದ್ದ ಹಳ್ಳಿಕಾರ ಸಮುದಾಯ ಸಮಾವೇಶ ಮತ್ತು ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಈ ಸಮುದಾಯವನ್ನು ಪ್ರವರ್ಗ-ಎಗೆ ಸೇರಿಸಿರುವುದು ಸರಿಯಲ್ಲ ಎನ್ನವಂತೆ ಕಾಣುತ್ತದೆ. ಪ್ರವರ್ಗ 1ಕ್ಕೆ ಸೇರಿಸುವ ಬೇಡಿಕೆ ಇದೆ. ಹೀಗಾಗಿ ವರದಿ ತರಿಸಿಕೊಂಡು ಆ ವರದಿ ಪರಿಶೀಲಿಸಿದ ನಂತರ ಸೂಕ್ತ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.

ದೇಶದಲ್ಲಿ 2011ರ ಜನಗಣತಿಯೇ ಕೊನೆ ಜನಗಣತಿಯಾಗಿದ್ದು, ಸಮಾಜದಲ್ಲಿನ ವಿವಿಧ ಜಾತಿಯ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿ ತಿಳಿಯಲು ಜಾತಿ ಸಮೀಕ್ಷೆ ವರದಿಗಳು ಪ್ರಮುಖವಾಗಿವೆ. ಹೀಗಾಗಿ ನಮ್ಮ ಸರ್ಕಾರವೇ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ. ಈಗಾಗಲೇ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿಯನ್ನು ಒದಗಿಸಿದೆ. ಹೀಗಾಗಿ ಈ ವ್ಯಾಪ್ತಿಯೊಳಗೆ ಹಳ್ಳಿಕಾರ ಸಮುದಾಯ ಬರುತ್ತಾ ಅಥವಾ ಇಲ್ಲವಾ ಎನ್ನುವುದನ್ನು ಪರಶೀಲಿಸಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Tags:
error: Content is protected !!