ರಾಜ್ಯ

ಹಂಪಿ | ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಮೂವರಿಗೆ ಮರಣದಂಡನೆ

ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಮೂವರು ಆರೋಪಿಗಳಿಗೆ ಗಲ್ಲು ಶಿಕ್ಷೆ (ಮರಣದಂಡನೆ) ವಿಧಿಸಲಾಗಿದೆ.

ಮಲ್ಲೇಶ್ ಅಲಿಯಾಸ್‌ ಹಂದಿಮಲ್ಲ, ಸಾಯಿ ಅಲಿಯಾಸ್ ಚೈತನ್ಯ ಸಾಯಿ, ಶರಣಪ್ಪ ಅಲಿಯಾಸ್ ಶರಣು ಬಸವರಾಜ್ ಶಿಕ್ಷೆಗೆ ಒಳಗಾದ ಆರೋಪಿಗಳು.

ಪ್ರಕರಣ ಹಿನ್ನೆಲೆ
2025ರ ಮಾರ್ಚ್ 6 ರಾತ್ರಿ, ತುಂಗಭದ್ರಾ ಎಡದಂಡೆ ಕಾಲುವೆ ಬಳಿ ನಕ್ಷತ್ರ ವೀಕ್ಷಣೆಗೆಂದು ಇಸ್ರೇಲ್‌ ಮಹಿಳೆ ಪ್ರವಾಸಕ್ಕೆ ಬಂದಿದ್ದಳು. ಒಡಿಶಾ ಮೂಲದ ಬಿಬಾಶ್‌ ಎನ್ನುವ ಯುವಕ ಸಹ ಪ್ರವಾಸಕ್ಕೆ ಬಂದಿದ್ದ. ಇವರ ಜೊತೆಗೆ ಅಮೇರಿಕ, ಮಹಾರಾಷ್ಟ್ರ ರಾಜ್ಯದ ಪ್ರವಾಸಿಗರು ಸಹ ಇದ್ದರು. ಇವರೆಲ್ಲರನ್ನೂ ಸ್ಥಳೀಯ ಹೊಂ ಸ್ಟೇ ಮಾಲಕಿ ಮಹಿಳೆ ತಡರಾತ್ರಿ ವೇಳೆ ಸಾಣಾಪುರದಲ್ಲಿ ಕಾಲುವೆ ಪಕ್ಕದಲ್ಲಿ ಬೆಳದಿಂಗಳ ಸೌಂದರ್ಯ ನೋಡಲು ಕರೆದುಕೊಂಡು ಬಂದಿದ್ದಳು.

ಈ ವೇಳೆ ಪಾನಪತ್ತರಾಗಿ ಅದೇ ಮಾರ್ಗದಲ್ಲಿ ಬಂದಿದ್ದ ಅಪರಾಧಿಗಳು ಇಸ್ರೇಲ್‌ ಮಹಿಳೆ ಮತ್ತು ಹೊಂಸ್ಟೇ ಮಾಲಕಿ ಮೇಲೆ ಅತ್ಯಾಚಾರ ಎಸಗಿದ್ದರು. ಘಟನೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿ, ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಘಟನೆ ನಡೆದ ಕೆಲವೇ ದಿನಗಳಲ್ಲಿ ಕೃತ್ಯ ಎಸಗಿದವರ ಬಂಧನವಾಗಿತ್ತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲ್ಲ: ಕೇಂದ್ರ ಸಚಿವ ವಿ.ಸೋಮಣ್ಣ

ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯನ್ನು ಕೇಂದ್ರ ರೈಲ್ವೆ ಸಚಿವ…

1 min ago

ವಿದ್ಯಾವಂತರೇ ಹೆಚ್ಚಾಗಿ ಕರ್ಮ‌ ಸಿದ್ಧಾಂತ ಪಾಲಿಸುತ್ತಾರೆ: ಸಿಎಂ ಸಿದ್ದರಾಮಯ್ಯ

ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.…

38 mins ago

ಶ್ರವಣದೋಷ ಮೆಟ್ಟಿನಿಂತು ಸಾಧನೆ ಮಾಡಿದ ಮಹದೇವ ಪ್ರಸಾದ್ ಕೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ದೊಡ್ಡಕವಲಂದೆ ಹೋಬಳಿಯ ದೊಡ್ಡಕವಲಂದೆ ಗ್ರಾಮದ ಕಾಂತರಾಜು ಮತ್ತು ಮಹೇಶ್ವರಿ ದಂಪತಿಗಳ ಪುತ್ರ ಮಹದೇವ…

1 hour ago

ಗುಂಡ್ಲುಪೇಟೆಯಲ್ಲಿ ಮುಳ್ಳುಹಂದಿ ದಾಳಿಗೆ ಚಿರತೆ ಸಾವು

ಗುಂಡ್ಲುಪೇಟೆ: ಬೇಟೆಯಾಡಲು ಹೋದ ಚಿರತೆಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.…

1 hour ago

ಏಪ್ರಿಲ್.16ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ

ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 10ನೇ ಸಚಿವ ಸಂಪುಟ ಸಭೆಯಲ್ಲಿ ಏಪ್ರಿಲ್.‌16ರಂದು ಕರೆಯಲಾಗಿದೆ. ಏಪ್ರಿಲ್.‌16ರ ಸಂಜೆ 4.30ಕ್ಕೆ ವಿಧಾನಸೌಧದ…

2 hours ago

ಕಾಂಗ್ರೆಸ್‌ ಆಡಳಿತದಲ್ಲಿ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಕುಸಿದು ಹೋಗಿವೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌…

2 hours ago