ಬೆಂಗಳೂರು: ಜೈನ ಸಮುದಾಯದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆ ಕೋರಿದ್ದಾರೆ.
ಗೌರಿ ಚಿತ್ರದ ಸಾಂಗ್ ಲಾಂಚ್ ಮಾಡುವ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಅವರು, ಜೈನರ ಫಿಲಾಸಫಿಯಲ್ಲಿ 24 ಜನ್ಮಗಳಿವೆ ಅಂತಾರೆ ಅದೆಲ್ಲಾ ಬುಲ್‌ಶಿಟ್ ಎಂಬ ಪದ ಬಳಸಿದ್ದರು.
ಹಂಸಲೇಖರ ಈ ಹೇಳಿಕೆ ಬೆನ್ನಲ್ಲೇ ಜೈನ ಸಮುದಾಯ ಭಾರೀ ಆಕ್ರೋಶ ವ್ಯಕ್ತಪಡಿಸಿ, ಹಂಸಲೇಖ ವಿರುದ್ಧ ತೀವ್ರವಾಗಿ ಕಿಡಿಕಾರಿತ್ತು.
ಇದರಿಂದ ಎಚ್ಚತ್ತ ಹಂಸಲೇಖ, ಈಗ ಜೈನ ಸಮುದಾಯದ ಜನತೆ ಬಳಿ ಕ್ಷಮೆ ಯಾಚಿಸಿದ್ದಾರೆ.
ಗಲಾಟೆ, ಒತ್ತಡದ ಆ ಕ್ಯಾಮರಾಗಳ ಗುಂಪಿನಲ್ಲಿ ಆ ಮಾತು ತೂರಿ ಬಂದಿದೆ. ತ್ಯಾಗ, ಸಹನೆಯ ಸಂಸ್ಕೃತಿಯನ್ನು ಜಗತ್ತಿಗೆ ನೀಡಿದ ಜೈನ ಸಮುದಾಯಕ್ಕೆ ನಾನು ಶಿರವಾಗಿ ಕ್ಷಮೆ ಕೋರುತ್ತೇವೆ ಎಂದು ಹಂಸಲೇಖ ಹೇಳಿದ್ದಾರೆ.





