ರಾಜ್ಯ

ಮುಡಾ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿ: ಆರ್.ಅಶೋಕ್‌ ಆಗ್ರಹ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಮುಡಾ ಹಗರಣವನ್ನು ಸಿಬಿಐಗೆ ವಹಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವರಣೆ ಪ್ರಕರಣದಡಿ ತನಿಖೆ ನಡೆಸಿರುವ ಜಾರಿ ನಿರ್ದೇಶನಾಲಯದ ಬೆಂಗಳೂರು ವಲಯ 300 ಕೋಟಿ ರೂ ಮಾರುಕಟ್ಟೆ ಮೌಲ್ಯದ 142 ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಆರ್.‌ಅಶೋಕ್‌ ಅವರು, ಸಿಎಂ ಸಿದ್ದರಾಮಯ್ಯ ಪದೇ ಪದೇ ಮುಡಾದಲ್ಲಿ ನನ್ನ ಪಾತ್ರವಿಲ್ಲ ಎಂದು ಹೇಳುತ್ತಿದ್ದರು. ಆದರೆ ಅವರ ಮುಖವಾಡ ನಿನ್ನೆ ಕಳಚಿ ಬಿದ್ದಿದೆ. ಸಿಎಂ ಧರ್ಮಪತ್ನಿ ಅವರಿಗೆ ಅಕ್ರಮವಾಗಿ ಹಂಚಿಕೆಯಾಗಿರುವ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ನಿವೇಶನಗಳಲ್ಲಿ ಸಿದ್ದರಾಮಯ್ಯನವರ ರಾಜಕೀಯ ಪ್ರಭಾವ ಬಳಕೆಯಾಗಿರುವುದು ಇಡಿ ಹೇಳಿಕೆಯಲ್ಲಿ ಸುಸ್ಪಷ್ಟವಾಗಿದೆ ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಧರ್ಮಪತ್ನಿ ಅವರಿಗೆ ಅಕ್ರಮವಾಗಿ ನಿವೇಶನ ಹಂಚಿಕೆಯಾದ ಸಂದರ್ಭದಲ್ಲಿ ಮುಡಾ ಆಯುಕ್ತರಾಗಿದ್ದ ನಟೇಶ್‌ ಸೇರಿದಂತೆ ಮತ್ತಿತರರ ಅಧಿಕಾರಿಗಳು ಇನ್ನೂ ಅನೇಕ ಅಕ್ರಮಗಳನ್ನು ಎಸಗಿರುವುದು ಬೆಳಕಿಗೆ ಬಂದಿದೆ. ಸುಮಾರು 300 ಕೋಟಿ ರೂಪಾಯಿ ಬೆಲೆಬಾಳುವ 142 ಸ್ಥಿರಾಸ್ತಿಗಳನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

5 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

6 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

7 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

7 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

7 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

8 hours ago