ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಸೆಯಿದೆ. ಆದರೆ ಟಿಕೆಟ್ ಕೈತಪ್ಪಿದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ನಾನು ಕೂಡ ಎನ್‌ಡಿಎ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ತೀರ್ಮಾನ ಮಾಡಿದ್ದೇನೆ. ಟಿಕೆಟ್ ಕೈತಪ್ಪಿದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಕಾಂಗ್ರೆಸ್‌ನಿಂದ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲ್ಲ ಎಂದರು.
ಹೈಕಮಾಂಡ್ ಭೇಟಿಯಾಗಿ ಚರ್ಚಿಸಿದ್ದೇನೆ. ರಾಜ್ಯ ನಾಯಕರು ಟಿಕೆಟ್ ಭರವಸೆ ನೀಡಿದ್ದಾರೆ. ಕೇಂದ್ರ ಸಚುವ ಎಚ್.ಡಿ.ಕುಮಾರಸ್ವಾಮಿ ಜೊತೆ ವರಿಷ್ಠರು ಮಾತನಾಡುತ್ತಾರೆ. ಕುಮಾರಸ್ವಾಮಿ ಒಪ್ಪಿಗೆ ನೀಡುವ ಭರವಸೆಯಿದೆ. ಹೀಗಾಗಿ ನಾನೇ ಚನ್ನಪಟ್ಟಣದಿಂದ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದರು.





