ರಾಜ್ಯ

ರಂಗೇರಿದ ಚನ್ನಪಟ್ಟಣ ಉಪಚುನಾವಣೆ: ಟಿಕೆಟ್‌ಗಾಗಿ ಸಿ.ಪಿ.ಯೋಗೇಶ್ವರ್‌ ಮನವಿ

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಸೆಯಿದೆ. ಆದರೆ ಟಿಕೆಟ್‌ ಕೈತಪ್ಪಿದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ನಾನು ಕೂಡ ಎನ್‌ಡಿಎ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ. ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ತೀರ್ಮಾನ ಮಾಡಿದ್ದೇನೆ. ಟಿಕೆಟ್‌ ಕೈತಪ್ಪಿದರೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಕಾಂಗ್ರೆಸ್‌ನಿಂದ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲ್ಲ ಎಂದರು.

ಹೈಕಮಾಂಡ್‌ ಭೇಟಿಯಾಗಿ ಚರ್ಚಿಸಿದ್ದೇನೆ. ರಾಜ್ಯ ನಾಯಕರು ಟಿಕೆಟ್‌ ಭರವಸೆ ನೀಡಿದ್ದಾರೆ. ಕೇಂದ್ರ ಸಚುವ ಎಚ್.ಡಿ.ಕುಮಾರಸ್ವಾಮಿ ಜೊತೆ ವರಿಷ್ಠರು ಮಾತನಾಡುತ್ತಾರೆ. ಕುಮಾರಸ್ವಾಮಿ ಒಪ್ಪಿಗೆ ನೀಡುವ ಭರವಸೆಯಿದೆ. ಹೀಗಾಗಿ ನಾನೇ ಚನ್ನಪಟ್ಟಣದಿಂದ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಜೆಟ್‌ ಕುರಿತು ನಡೆದ ಚರ್ಚೆಯ ಮೇಲಿನ ಉತ್ತರ ಪ್ರಮುಖ ಅಂಶಗಳಿವು.!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಕುರಿತು ನಡೆಸಿದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.…

14 mins ago

ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ,…

25 mins ago

ಹಾರ್ಮುಜ್‌ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್‌ ನೌಕಾ ಕಮಾಂಡರ್‌ ಹತ್ಯೆ

ಜೆರುಸೇಲಂ: ಬಂದರ್‌ ಅಬ್ಬಾಸ್‌ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್‌ ಕಾಪ್ಸ್‌ ನೌಕಾ ಕಮಾಂಡರ್‌ ಅಲಿರೆಜಾ ತಂಗ್‌ ಸಿರಿ ಮೃತಪಟ್ಟಿದ್ದಾರೆ.…

35 mins ago

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…

58 mins ago

ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಹೆಬ್ಬಾಳಕರ್‌

ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು…

1 hour ago

ತೀವ್ರಗೊಂಡ ಪೂರ್ವಮುಂಗಾರು : ಏ.1ರವರೆಗೆ ರಾಜ್ಯದಲ್ಲಿ ಆಲಿಕಲ್ಲು ಮಳೆ

ಮೈಸೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು…

1 hour ago