ಮಂಡ್ಯ: ತಾಲ್ಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿರುವುದನ್ನು ಖಂಡಿಸಿ ಬಿಜೆಪಿ, ಜೆಡಿಎಸ್ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಸೋಮವಾರ ಕೆರಗೋಡು ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ.
15 ಕಿ.ಮೀ ಪಾದಯಾತ್ರೆ ಕೈಗೊಂಡಿರುವ ಸಾವಿರಾರು ಕಾರ್ಯಕರ್ತರು ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತಿದ್ದಾರೆ. ಮಂಡ್ಯ ಶಾಸಕ ಗಣಿಗ ರವಿಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಾರ್ಗದುದ್ದಕ್ಕೂ ಹಳ್ಳಿಗಳ ಜನರು ಕಾರ್ಯಕರ್ತರಿಗೆ ಹಾರ ಹಾಕಿ ಸ್ವಾಗತ ಕೋರುತ್ತಿದ್ದಾರೆ. ಮಜ್ಜಿಗೆ, ಪಾನಕ ವಿತರಣೆ ಮಾಡುತ್ತಿದ್ದಾರೆ. ಅಲ್ಲಲ್ಲಿ ಶ್ರೀರಾಮನ ಫೋಟೊ ಇಟ್ಟು ಪೂಜೆ ಸಲ್ಲಿಸುತ್ತಿದ್ದಾರೆ.
ಬಿಜೆಪಿ ಮುಖಂಡರಾದ ಸಿ.ಟಿ.ರವಿ, ಕೆ.ಸಿ.ನಾರಾಯಣಗೌಡ, ಪ್ರೀತಂ ಗೌಡ, ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ, ಡಾ.ಇಂದ್ರೇಶ್ ಕುಮಾರ್, ಜೆಡಿಎಸ್ ಶಾಸಕ ಎಚ್.ಟಿ ಮಂಜು, ಮುಖಂಡರಾದ ಸುರೇಶ್ ಗೌಡ, ಡಾ. ಕೆ ಅನ್ನದಾನಿ ಮುಂತಾದವರು ಪಾದಯಾತ್ರೆಯಲ್ಲಿ ಇದ್ದಾರೆ.
ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ: ಷ್ಟ್ರಧ್ವಜಕ್ಕೆ ಸರ್ಕಾರದಿಂದ ಅಪಮಾನ ಹಾಗೂ ಹನುಮ ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಐವರು ಇನ್ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಬಿಗಿ ಭದ್ರತೆ ಆಯೋಜಿಸಲಾಗಿದೆ. ಪ್ರತಿಭಟನೆಗೆ ಈಗಾಗಲೇ ಪೊಲೀಸರು ಅನುಮತಿ ನಿರಾಕರಿಸಿ ನೊಟೀಸ್ ಜಾರಿ ಮಾಡಲಾಗಿದ್ದಾರೆ. ಆದರೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಶಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಬ್ಯಾರಿಕೇಡ್ ಮತ್ತು ಪೊಲೀಸ್ ದಿಗ್ಬಂಧನದ ನಡುವೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ವೇಳೆ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಲ್ಲದೇ ಜೈ ಶ್ರೀರಾಮ್ ಘೋಷಣೆ ಮೊಳಗಿಸುತ್ತಾ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟದ ಜೊತೆಗೆ ಮಾತನಿ ಚಕಮಕಿ ನಡೆದಿದ್ದು, ನಂತರ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…