ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಇದಕ್ಕಾಗಿ ಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸಚಿವ ಸಂಪುಟ ನಡೆಯಲಿರುವ ಹಿನ್ನೆಲೆಯಲ್ಲಿ ಇಡೀ ಮಹದೇಶ್ವರ ಬೆಟ್ಟ ಸಿಂಗಾರಗೊಂಡು ಝುಗಮಗಿಸುತ್ತಿದ್ದು, ಜಿಲ್ಲಾಡಳಿತ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಅಚ್ಚುಕಟ್ಟಾಗಿ ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ.
ನಾಳೆ ಮಹದೇಶ್ವರ ಬೆಟ್ಟದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟ ನಡೆಯುತ್ತಿದ್ದು, ಚಾಮರಾಜನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ನಿರೀಕ್ಷೆಯಿದೆ.
ಇನ್ನು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯುತ್ತಿರುವುದರಿಂದ ಸಾಲೂರು ಬೃಹನ್ ಮಠದ ಎಸ್ ಬಿ ಐ ಸರ್ಕಲ್ ನಲ್ಲಿ ರಾಜಗೋಪುರ ಮಾದರಿ, ವಜ್ರಮಲೈ ವಸತಿಗೃಹದ ಮುಂಭಾಗ ಸ್ವಾಗತ ಕಮಾನು, ಆನೆ ತಲೆ ದಿಂಬ ಸಚಿವ ಸಂಪುಟ ಸಭೆ 108 ಅಡಿ ಮಲೆ ಮಹದೇಶ್ವರ ಪ್ರತಿಮೆ ಸ್ಥಳಗಳಲ್ಲಿ ವಿಶೇಷ ವಿನೂತನ ಮಾದರಿಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ತನ್ನದೇ ಆದ ಇತಿಹಾಸ ಹೊಂದಿರುವ ಗೋಪುರಗಳ ಮಾದರಿಯಲ್ಲಿ ವಿದ್ಯುತ್ ದೀಪ ಅಲಂಕಾರ ಮಾಡಲಾಗಿದೆ.





