ರಾಜ್ಯ

ಮೈಕ್ರೋ ಫೈನಾನ್ಸ್‌ ಕಿರುಕುಳ| 3 ವರ್ಷ ಜೈಲು, 1ಲಕ್ಷ ರೂ.ವರೆಗೆ ದಂಡ ವಿಧಿಸಲು ಕರುಡು ಬಿಲ್‌ನಲ್ಲಿ ಕಾನೂನು ಅಡಕ: ರಾಜ್ಯ ಸರ್ಕಾರ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕಿರುಕುಳ ವಿಚಾರಕ್ಕೆ ಸಂಬಂಧಿಸಿದಂತೆ 3 ವರ್ಷ ಜೈಲು, 1ಲಕ್ಷ ರೂ.ವರೆಗೆ ದಂಡ ವಿಧಿಸಲು ಕರುಡು ಬಿಲ್‌ ಸಿದ್ಧವಾಗಿದ್ದು, ಗುರುವಾರ(ಜ.30) ಸುಗ್ರಿವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಈ ವಿಚಾರವಾಗಿ ಕ್ಯಾಬಿನೆಟ್ ಅಜೆಂಡಾದಲ್ಲಿ ಸುಗ್ರೀವಾಜ್ಞೆ ವಿಷಯ ಸೇರ್ಪಡೆ ಮಾಡಿದ್ದು, ಕಾನೂನು ಇಲಾಖೆಯಿಂದ ಕರ್ನಾಟಕ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಣ ಹಾಗೂ ಲೇವಾದೇವಿ ನಿಯಂತ್ರಣ 2025ರ ಕರಡು ಬಿಲ್ ಸಿದ್ಧಪಡಿಸಿಕೊಂಡಿದೆ. ಅಲ್ಲದೇ ಈ ಬಿಲ್ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಮೊದಲ ಆದ್ಯತೆ ನೀಡಿ, ಸುಗ್ರೀವಾಜ್ಞೆ ಕೈಗೆತ್ತಿಕೊಳ್ಳಲು ನಿರ್ಧಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೈಕ್ರೋ ಫೈನಾನ್ಸ್‌ ಕಂಪೆನಿಗಳು ಸಾರ್ವಜನಿಕರಿಗೆ ಕಿರುಕುಳ ನೀಡಿದರೆ ಅಂತಹ ಕಂಪೆನಿಗಳ ವಿರುದ್ಧ 3 ವರ್ಷ ಜೈಲು, 1ಲಕ್ಷ ರೂ.ವರೆಗೆ ದಂಡ ವಿಧಿಸಲು ಕರುಡು ಬಿಲ್‌ನಲ್ಲಿ ಕಾನೂನು ರಚಿಸಲಾಗಿದೆ. ಅಲ್ಲದೇ ನೋಂದಣಿ ಪ್ರಾಧಿಕಾರದ ಮೂಲಕ ಮೈಕ್ರೋ ಫೈನಾನ್ಸ್‌ಗಳಿಗೆ ಕಡ್ಡಾಯ ನೋಂದಣಿ ನಿಯಮಗಳನ್ನು ಜಾರಿಗೊಳಿಸುತ್ತಿದೆ. ಜೊತೆಗೆ ಆರ್‌ಬಿಐ ನಿಯಮಗಳ ಅನ್ವಯ ಸಾಲ‌ಮಿತಿ, ಬಡ್ಡಿ ಮಿತಿಗಳನ್ನ ಪಾಲಿಸಬೇಕೆಂಬ ಷರತ್ತು ಸುಗ್ರೀವಾಜ್ಞೆಯಲ್ಲಿ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಾಲ ವಸೂಲಾತಿಗೂ ಕಠಿಣ ಷರತ್ತುಗಳನ್ನು ಹಾಕಲಾಗತ್ತಿದ್ದು, ಕಿರುಕುಳ ನೀಡಿದ ಫೈನಾನ್ಸ್‌ ಕಂಪೆನಿಗಳ ವಿರುದ್ಧ ಮುಲಾಜಿಲ್ಲದೇ ಈ ಕ್ರಮಗಳನ್ನು ಸುಗ್ರೀವಾಜ್ಞೆ ಮೂಲಕ ತರಲಾಗುತ್ತಿದೆ. ಹೀಗಾಗಿ ಜ.30, ಗುರುವಾರ ಸುಗ್ರೀವಾಜ್ಞೆ ಜಾರಿಗೊಳಿಸುತ್ತಿದ್ದು, ಕರಡು ಬಿಲ್ ಕುರಿತು ಚರ್ಚಿಸಿ ಆ ನಂತರ ಕೆಲ ಸಣ್ಣಪುಟ್ಟ ಮಾರ್ಪಾಡುಗಳನ್ನು ಮಾಡುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಅರ್ಚನ ಎಸ್‌ ಎಸ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

5 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

10 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

11 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

12 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

13 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

18 hours ago