ಮಂಗಳೂರು : ಸಿಎಂ ಬಗ್ಗೆ ಶಾಸಕ ಹರೀಶ್ ಪೂಂಜಾ ಕಲೆಕ್ಷನ್ ಮಾಸ್ಟರ್ ಎಂಬ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ. ನಾನು 83 ರಿಂದ ಶಾಸಕನಾಗಿ, 85ರಲ್ಲೇ ಮಿನಿಸ್ಟರ್ ಆಗಿದ್ದವನು.ಯಾರೂ ನನ್ನನ್ನು ಈ ರೀತಿ ಕರೆದಿರಲಿಲ್ಲ. ಇವರು ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ. ಇದನ್ನು ಹಿಂದಿನ ಬಿಜೆಪಿ ಸರ್ಕಾರ ಮತ್ತು ಬಿಜೆಪಿ ಮುಖ್ಯಮಂತ್ರಿಗಳಿಗೆ ಹೇಳಲಿ ಎಂದು ಕಿಡಿಕಾರಿದರು.
50 ಕೋಟಿ ಆಫರ್ ಬಗ್ಗೆ ನನಗೆ ಗೊತ್ತಿಲ್ಲ, ರವಿ ಹತ್ತಿರ ಕೇಳಿ. ಯಾರು ಹೇಳಿದ್ದಾರೋ ಅವರ ಹತ್ತಿರ ಕೇಳಿ. ನನಗೆ ಯಾವುದೇ ಮಾಹಿತಿ ಬಂದಿಲ್ಲ. ಬಿಜೆಪಿಯವರು ನಮ್ಮ ಸರ್ಕಾರ ಅಸ್ಥಿರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನುವ ಮಾಹಿತಿ ಇದೆ. 50 ಕೋಟಿ ಕೊಟ್ಟು ಅಧಿಕಾರದ ಆಫರ್ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಇಲ್ಲ ಎಂದರು.
ಪರಮೇಶ್ವರ್ ಮನೆಯಲ್ಲಿ ಡಿನ್ನರ್ ಪಾರ್ಟಿ ಕುರಿತಾಗಿ ಮಾತನಾಡಿದ ಅವರು, ಪರಮೇಶ್ವರ್ ಊಟಕ್ಕೆ ಕರೆದಿದ್ದರು, ಹೋಗಿದ್ದೇವೆ. ಅದಕ್ಕೆ ಮಸಾಲೆ ಯಾಕೆ ಹಾಕ್ತೀರಾ? ಅವರು ನನಗೆ, ಮಹಾದೇವಪ್ಪ, ಸತೀಶ್ ಜಾರಕಿಹೊಳಿಗೆ ಊಟಕ್ಕೆ ಕರೆದಿದ್ದರು. ಅಲ್ಲಿ ಯಾವುದೇ ರಾಜಕೀಯ ಇಲ್ಲ. ಅದೆಲ್ಲಾ ಸುಳ್ಳು. ಬಣ್ಣ ಕಟ್ಟಲಾಗ್ತಿದೆ ಎಂದು ಸ್ಪಷ್ಟನೆ ನೀಡಿದರು.
ಮೊದಲ ಹಂತದಲ್ಲಿ ಕೆಲ ಶಾಸಕರಿಗೆ ನಿಗಮ ಮಂಡಳಿ ಕೊಡುತ್ತೇವೆ. ಎರಡನೇ ಹಂತದಲ್ಲಿ ಕಾರ್ಯಕರ್ತರು, ನಾಯಕರಿಗೆ ಶೀಘ್ರವಾಗಿ ಹಂಚಿಕೆ ಮಾಡಲಾಗುತ್ತದೆ. ನಾವು ಬರ ಪರಿಹಾರ 7,900 ಕೋಟಿ ಕೇಳಿದ್ದೇವೆ. ಆದರೆ ಕೇಂದ್ರ ಸರ್ಕಾರ ಒಂದು ರೂ. ಪರಿಹಾರ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಹೊಂದಿದೆ ಎಂದರು. ಇನ್ನು ಕಾರ್ಕಳದ ಪರಶುರಾಮ ಮೂರ್ತಿ ಅಸಲಿನಾ? ನಕಲಿನಾ ಎಂಬುದರ ಕುರಿತು ತನಿಖೆ ಆಗಲಿದೆ ಎಂದು ಹೇಳಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…